ಅರಣ್ಯಕಾಂಡ 36 : 1 (IRVKN)
{ಸ್ತ್ರೀಯರು ಮತ್ತು ಆಸ್ತಿಯ ಬಾಧ್ಯತೆ} [PS] ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
ಅರಣ್ಯಕಾಂಡ 36 : 2 (IRVKN)
“ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
ಅರಣ್ಯಕಾಂಡ 36 : 3 (IRVKN)
ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.
ಅರಣ್ಯಕಾಂಡ 36 : 4 (IRVKN)
ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
ಅರಣ್ಯಕಾಂಡ 36 : 5 (IRVKN)
ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, “ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.
ಅರಣ್ಯಕಾಂಡ 36 : 6 (IRVKN)
ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
ಅರಣ್ಯಕಾಂಡ 36 : 7 (IRVKN)
ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
ಅರಣ್ಯಕಾಂಡ 36 : 8 (IRVKN)
ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
ಅರಣ್ಯಕಾಂಡ 36 : 9 (IRVKN)
ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 36 : 10 (IRVKN)
ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.
ಅರಣ್ಯಕಾಂಡ 36 : 11 (IRVKN)
ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
ಅರಣ್ಯಕಾಂಡ 36 : 12 (IRVKN)
ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.
ಅರಣ್ಯಕಾಂಡ 36 : 13 (IRVKN)
ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ. [PE]

1 2 3 4 5 6 7 8 9 10 11 12 13

BG:

Opacity:

Color:


Size:


Font: