ಅರಣ್ಯಕಾಂಡ 4 : 1 (IRVKN)
ಕೆಹಾತ್ಯರಿಗೆ ಕೆಲಸಗಳನ್ನು ನೇಮಿಸಿದ್ದು ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,
ಅರಣ್ಯಕಾಂಡ 4 : 2 (IRVKN)
“ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
ಅರಣ್ಯಕಾಂಡ 4 : 3 (IRVKN)
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.
ಅರಣ್ಯಕಾಂಡ 4 : 4 (IRVKN)
ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.
ಅರಣ್ಯಕಾಂಡ 4 : 5 (IRVKN)
ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,
ಅರಣ್ಯಕಾಂಡ 4 : 6 (IRVKN)
ಅದರ ಮೇಲೆ * ವಿಮೋ 25:5 ನೋಡಿರಿ. ಕಡಲಪ್ರಾಣಿಯ ತೊಗಲನ್ನೂ. ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.
ಅರಣ್ಯಕಾಂಡ 4 : 7 (IRVKN)
ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.
ಅರಣ್ಯಕಾಂಡ 4 : 8 (IRVKN)
ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.
ಅರಣ್ಯಕಾಂಡ 4 : 9 (IRVKN)
ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ
ಅರಣ್ಯಕಾಂಡ 4 : 10 (IRVKN)
ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.
ಅರಣ್ಯಕಾಂಡ 4 : 11 (IRVKN)
ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.
ಅರಣ್ಯಕಾಂಡ 4 : 12 (IRVKN)
ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.
ಅರಣ್ಯಕಾಂಡ 4 : 13 (IRVKN)
ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.
ಅರಣ್ಯಕಾಂಡ 4 : 14 (IRVKN)
ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
ಅರಣ್ಯಕಾಂಡ 4 : 15 (IRVKN)
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
ಅರಣ್ಯಕಾಂಡ 4 : 16 (IRVKN)
ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
ಅರಣ್ಯಕಾಂಡ 4 : 17 (IRVKN)
ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
ಅರಣ್ಯಕಾಂಡ 4 : 18 (IRVKN)
“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.
ಅರಣ್ಯಕಾಂಡ 4 : 19 (IRVKN)
ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.
ಅರಣ್ಯಕಾಂಡ 4 : 20 (IRVKN)
ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.
ಅರಣ್ಯಕಾಂಡ 4 : 21 (IRVKN)
ಗೇರ್ಷೋನ್ಯರಿಗೆ ಕೆಲಸಗಳನ್ನು ನೇಮಿಸಿದ್ದು ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
ಅರಣ್ಯಕಾಂಡ 4 : 22 (IRVKN)
“ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.
ಅರಣ್ಯಕಾಂಡ 4 : 23 (IRVKN)
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.
ಅರಣ್ಯಕಾಂಡ 4 : 24 (IRVKN)
ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;
ಅರಣ್ಯಕಾಂಡ 4 : 25 (IRVKN)
ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,
ಅರಣ್ಯಕಾಂಡ 4 : 26 (IRVKN)
ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
ಅರಣ್ಯಕಾಂಡ 4 : 27 (IRVKN)
ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
ಅರಣ್ಯಕಾಂಡ 4 : 28 (IRVKN)
ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.
ಅರಣ್ಯಕಾಂಡ 4 : 29 (IRVKN)
ಮೆರಾರೀಯರಿಗೆ ಕೆಲಸಗಳನ್ನು ನೇಮಿಸಿದ್ದು “ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
ಅರಣ್ಯಕಾಂಡ 4 : 30 (IRVKN)
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.
ಅರಣ್ಯಕಾಂಡ 4 : 31 (IRVKN)
ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,
ಅರಣ್ಯಕಾಂಡ 4 : 32 (IRVKN)
ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.
ಅರಣ್ಯಕಾಂಡ 4 : 33 (IRVKN)
ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.
ಅರಣ್ಯಕಾಂಡ 4 : 34 (IRVKN)
ಲೇವಿ ಗೋತ್ರಕುಟುಂಬಗಳ ಲೆಕ್ಕ ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
ಅರಣ್ಯಕಾಂಡ 4 : 35 (IRVKN)
ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.
ಅರಣ್ಯಕಾಂಡ 4 : 36 (IRVKN)
ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.
ಅರಣ್ಯಕಾಂಡ 4 : 37 (IRVKN)
ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
ಅರಣ್ಯಕಾಂಡ 4 : 38 (IRVKN)
ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
ಅರಣ್ಯಕಾಂಡ 4 : 39 (IRVKN)
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.
ಅರಣ್ಯಕಾಂಡ 4 : 40 (IRVKN)
ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.
ಅರಣ್ಯಕಾಂಡ 4 : 41 (IRVKN)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
ಅರಣ್ಯಕಾಂಡ 4 : 42 (IRVKN)
ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
ಅರಣ್ಯಕಾಂಡ 4 : 43 (IRVKN)
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.
ಅರಣ್ಯಕಾಂಡ 4 : 44 (IRVKN)
ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.
ಅರಣ್ಯಕಾಂಡ 4 : 45 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.
ಅರಣ್ಯಕಾಂಡ 4 : 46 (IRVKN)
ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
ಅರಣ್ಯಕಾಂಡ 4 : 47 (IRVKN)
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
ಅರಣ್ಯಕಾಂಡ 4 : 48 (IRVKN)
ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.
ಅರಣ್ಯಕಾಂಡ 4 : 49 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49