ಅರಣ್ಯಕಾಂಡ 5 : 1 (IRVKN)
ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂಬ ನಿಯಮ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 5 : 2 (IRVKN)
“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
ಅರಣ್ಯಕಾಂಡ 5 : 3 (IRVKN)
ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”
ಅರಣ್ಯಕಾಂಡ 5 : 4 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.
ಅರಣ್ಯಕಾಂಡ 5 : 5 (IRVKN)
ಮೋಸದಿಂದ ಪಡೆದುದನ್ನು ಹಿಂತಿರುಗಿಸಬೇಕೆಂಬ ನಿಯಮ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 5 : 6 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
ಅರಣ್ಯಕಾಂಡ 5 : 7 (IRVKN)
ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.
ಅರಣ್ಯಕಾಂಡ 5 : 8 (IRVKN)
“ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.
ಅರಣ್ಯಕಾಂಡ 5 : 9 (IRVKN)
ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
ಅರಣ್ಯಕಾಂಡ 5 : 10 (IRVKN)
ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
ಅರಣ್ಯಕಾಂಡ 5 : 11 (IRVKN)
ಅಪನಂಬಿಗಸ್ತ ಪತ್ನಿಯ ಪರಿಹಾರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 5 : 12 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,
ಅರಣ್ಯಕಾಂಡ 5 : 13 (IRVKN)
ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ,
ಅರಣ್ಯಕಾಂಡ 5 : 14 (IRVKN)
ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
ಅರಣ್ಯಕಾಂಡ 5 : 15 (IRVKN)
ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
ಅರಣ್ಯಕಾಂಡ 5 : 16 (IRVKN)
“ ‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.
ಅರಣ್ಯಕಾಂಡ 5 : 17 (IRVKN)
ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
ಅರಣ್ಯಕಾಂಡ 5 : 18 (IRVKN)
ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
ಅರಣ್ಯಕಾಂಡ 5 : 19 (IRVKN)
ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.
ಅರಣ್ಯಕಾಂಡ 5 : 20 (IRVKN)
ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,”
ಅರಣ್ಯಕಾಂಡ 5 : 21 (IRVKN)
“ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ * ಗರ್ಭಸ್ರಾವ ಅಥವಾ ಬಂಜೆ. ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.
ಅರಣ್ಯಕಾಂಡ 5 : 22 (IRVKN)
ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
ಅರಣ್ಯಕಾಂಡ 5 : 23 (IRVKN)
“ ‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.
ಅರಣ್ಯಕಾಂಡ 5 : 24 (IRVKN)
ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.
ಅರಣ್ಯಕಾಂಡ 5 : 25 (IRVKN)
ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.
ಅರಣ್ಯಕಾಂಡ 5 : 26 (IRVKN)
ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.
ಅರಣ್ಯಕಾಂಡ 5 : 27 (IRVKN)
ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.
ಅರಣ್ಯಕಾಂಡ 5 : 28 (IRVKN)
ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.
ಅರಣ್ಯಕಾಂಡ 5 : 29 (IRVKN)
ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.
ಅರಣ್ಯಕಾಂಡ 5 : 30 (IRVKN)
ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅಥವಾ ಯಾಜಕನು. ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.
ಅರಣ್ಯಕಾಂಡ 5 : 31 (IRVKN)
ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31