ಅರಣ್ಯಕಾಂಡ 6 : 1 (IRVKN)
ನಾಜೀರನ ವ್ರತ ನಿಯಮ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 6 : 2 (IRVKN)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ * ಯೆಹೋವನಿಗಾಗಿ ಪ್ರತ್ಯೇಕಿಸಲ್ಪಟ್ಟವನು ಅಥವಾ ಪ್ರತಿಷ್ಠಿಸಲ್ಪಟ್ಟವನು. ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
ಅರಣ್ಯಕಾಂಡ 6 : 3 (IRVKN)
ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
ಅರಣ್ಯಕಾಂಡ 6 : 4 (IRVKN)
ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.
ಅರಣ್ಯಕಾಂಡ 6 : 5 (IRVKN)
“ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
ಅರಣ್ಯಕಾಂಡ 6 : 6 (IRVKN)
ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
ಅರಣ್ಯಕಾಂಡ 6 : 7 (IRVKN)
ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
ಅರಣ್ಯಕಾಂಡ 6 : 8 (IRVKN)
ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
ಅರಣ್ಯಕಾಂಡ 6 : 9 (IRVKN)
ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
ಅರಣ್ಯಕಾಂಡ 6 : 10 (IRVKN)
ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
ಅರಣ್ಯಕಾಂಡ 6 : 11 (IRVKN)
ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
ಅರಣ್ಯಕಾಂಡ 6 : 12 (IRVKN)
ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
ಅರಣ್ಯಕಾಂಡ 6 : 13 (IRVKN)
ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
ಅರಣ್ಯಕಾಂಡ 6 : 14 (IRVKN)
ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದಟಗರನ್ನು ಹಾಗು ತರಬೇಕು.
ಅರಣ್ಯಕಾಂಡ 6 : 15 (IRVKN)
ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
ಅರಣ್ಯಕಾಂಡ 6 : 16 (IRVKN)
ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 6 : 17 (IRVKN)
ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
ಅರಣ್ಯಕಾಂಡ 6 : 18 (IRVKN)
ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
ಅರಣ್ಯಕಾಂಡ 6 : 19 (IRVKN)
ತರುವಾಯ ಯಾಜಕನು ಆ ಟಗರಿನ ಬೇಯಿಸಿದ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
ಅರಣ್ಯಕಾಂಡ 6 : 20 (IRVKN)
ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
ಅರಣ್ಯಕಾಂಡ 6 : 21 (IRVKN)
ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
ಅರಣ್ಯಕಾಂಡ 6 : 22 (IRVKN)
ಆಶೀರ್ವಾದ ವಚನ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 6 : 23 (IRVKN)
“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
ಅರಣ್ಯಕಾಂಡ 6 : 24 (IRVKN)
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
ಅರಣ್ಯಕಾಂಡ 6 : 25 (IRVKN)
ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;
ಅರಣ್ಯಕಾಂಡ 6 : 26 (IRVKN)
ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
ಅರಣ್ಯಕಾಂಡ 6 : 27 (IRVKN)
ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27