ಫಿಲೆಮೋನನಿಗೆ 1 : 1 (IRVKN)
* ವ. 9; ಎಫೆ 3:1: ಕ್ರಿಸ್ತ ಯೇಸುವಿನ † 1 ಥೆಸ. 3:2: ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,
ಫಿಲೆಮೋನನಿಗೆ 1 : 2 (IRVKN)
ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ‡ ಕೊಲೊ 4:17: ಅರ್ಖಿಪ್ಪನಿಗೂ § ರೋಮಾ. 16:5: ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:
ಫಿಲೆಮೋನನಿಗೆ 1 : 3 (IRVKN)
* ರೋಮಾ. 1:7: ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ.
ಫಿಲೆಮೋನನಿಗೆ 1 : 4 (IRVKN)
ಫಿಲೆಮೋನನ ಪ್ರೀತಿ ಮತ್ತು ನಂಬಿಕೆ ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ† ಎಫೆ 1:15: ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ‡ ಕೊಲೊ 1:4: ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,
ಫಿಲೆಮೋನನಿಗೆ 1 : 5 (IRVKN)
ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು § ರೋಮಾ. 1:8,9: ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.
ಫಿಲೆಮೋನನಿಗೆ 1 : 6 (IRVKN)
ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. * ಅಥವಾ, ನಿನ್ನ ನಂಬಿಕೆಯಿಂದ ಉಂಟಾಗುವ ಪರೋಪಕಾರಗುಣವು. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.
ಫಿಲೆಮೋನನಿಗೆ 1 : 7 (IRVKN)
ಸಹೋದರನೇ, † ವ. 20, 2 ತಿಮೊ. 1:16: ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ‡ 2 ಕೊರಿ 7:4,13; ಕೊಲೊ 4:11: ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.
ಫಿಲೆಮೋನನಿಗೆ 1 : 8 (IRVKN)
ಓಡಿಹೋದ ಓನೇಸಿಮನೆಂಬ ದಾಸನನ್ನು ಕ್ಷಮಿಸಿ ಸೇರಿಸಿಕೊಳ್ಳಬೇಕೆಂದು ವಿಜ್ಞಾಪನೆ § ಅಥವಾ, ರಾಯಭಾರಿಯೂ. ಎಫೆ 6:20: ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ * ವ. 1: ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.
ಫಿಲೆಮೋನನಿಗೆ 1 : 9 (IRVKN)
ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ † 1 ಥೆಸ. 2:6: ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ
ಫಿಲೆಮೋನನಿಗೆ 1 : 10 (IRVKN)
ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ‡ 3 ಯೋಹಾ 4: ಮಗನಂತೆ § ವ. 13; 1 ಕೊರಿ 4:15; ಗಲಾ. 4:19: ಬಂದ * ಕೊಲೊ 4:9: ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
ಫಿಲೆಮೋನನಿಗೆ 1 : 11 (IRVKN)
ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
ಫಿಲೆಮೋನನಿಗೆ 1 : 12 (IRVKN)
ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.
ಫಿಲೆಮೋನನಿಗೆ 1 : 13 (IRVKN)
† ವ. 10; ಫಿಲಿ. 1:7: ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.
ಫಿಲೆಮೋನನಿಗೆ 1 : 14 (IRVKN)
ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.
ಫಿಲೆಮೋನನಿಗೆ 1 : 15 (IRVKN)
ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು;
ಫಿಲೆಮೋನನಿಗೆ 1 : 16 (IRVKN)
‡ 1 ಕೊರಿ 7:22: ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. § ಮತ್ತಾ 23:8; ಕೊಲೊ 4:9; 1 ತಿಮೊ. 6:2: ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ * ಕೊಲೊ 3:22,23; ಎಫೆ 6:5: ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?
ಫಿಲೆಮೋನನಿಗೆ 1 : 17 (IRVKN)
ನೀನು ನನ್ನನ್ನು † 2 ಕೊರಿ 8:23: ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
ಫಿಲೆಮೋನನಿಗೆ 1 : 18 (IRVKN)
ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.
ಫಿಲೆಮೋನನಿಗೆ 1 : 19 (IRVKN)
ನಾನೇ ಕೊಟ್ಟು ತೀರಿಸುತ್ತೇನೆಂದು ‡ 1 ಕೊರಿ 16:21: ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
ಫಿಲೆಮೋನನಿಗೆ 1 : 20 (IRVKN)
ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. § ವ. 7: ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.
ಫಿಲೆಮೋನನಿಗೆ 1 : 21 (IRVKN)
ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.
ಫಿಲೆಮೋನನಿಗೆ 1 : 22 (IRVKN)
ಕಡೆ ಮಾತುಗಳೂ ಹಾಗೂ ವಂದನೆಗಳು ಇದಲ್ಲದೆ * 2 ಕೊರಿ 1:11: ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.
ಫಿಲೆಮೋನನಿಗೆ 1 : 23 (IRVKN)
ಕ್ರಿಸ್ತಯೇಸುವಿನ ನಿಮಿತ್ತವಾಗಿ † ರೋಮಾ. 16:7: ನನ್ನ ಜೊತೆ ಸೆರೆಯವನಾದ ‡ ಕೊಲೊ 1:7: ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ.
ಫಿಲೆಮೋನನಿಗೆ 1 : 24 (IRVKN)
ನನ್ನ ಜೊತೆಗೆಲಸದವರಾದ § ಕೊಲೊ 4:10: ಮಾರ್ಕ, ಅರಿಸ್ತಾರ್ಕ, * ಕೊಲೊ 4:14; 2 ತಿಮೊ. 4:10,11: ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.
ಫಿಲೆಮೋನನಿಗೆ 1 : 25 (IRVKN)
† ಗಲಾ. 6:18: ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
❮
❯