ಫಿಲಿಪ್ಪಿಯವರಿಗೆ 4 : 1 (IRVKN)
ಫಿಲಿಪ್ಪಿಯವರಿಗೆ 4 : 2 (IRVKN)
ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ * ಫಿಲಿ. 1:4, 2:16 ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ † ಫಿಲಿ. 1:27 ದೃಢವಾಗಿ ನಿಲ್ಲಿರಿ, ಪ್ರಿಯರೇ. ಉತ್ತೇಜನದ ಮಾತುಗಳು ಕರ್ತನಲ್ಲಿ ‡ ಫಿಲಿ. 2:2 ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ಫಿಲಿಪ್ಪಿಯವರಿಗೆ 4 : 3 (IRVKN)
ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. § ಲೂಕ 10:20 ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
ಫಿಲಿಪ್ಪಿಯವರಿಗೆ 4 : 4 (IRVKN)
* ಫಿಲಿ. 3:1 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
ಫಿಲಿಪ್ಪಿಯವರಿಗೆ 4 : 5 (IRVKN)
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, † 1 ಕೊರಿ 16:23, ಯಾಕೋಬ. 5:8 ಕರ್ತನು ಹತ್ತಿರವಾಗಿದ್ದಾನೆ.
ಫಿಲಿಪ್ಪಿಯವರಿಗೆ 4 : 6 (IRVKN)
‡ ಮತ್ತಾ 6:25 ಯಾವ ಸಂಬಂಧವಾಗಿಯೂ ಚಿಂತೆಮಾಡದೆ § ಜ್ಞಾ. 16:3 ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ಫಿಲಿಪ್ಪಿಯವರಿಗೆ 4 : 7 (IRVKN)
* ಎಫೆ 3:19 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ † ವ. 9, ಯೆಶಾ 26:3, ಕೊಲೊ 3:15, ಯೋಹಾ 14:27 ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ಫಿಲಿಪ್ಪಿಯವರಿಗೆ 4 : 8 (IRVKN)
ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
ಫಿಲಿಪ್ಪಿಯವರಿಗೆ 4 : 9 (IRVKN)
‡ 1 ಥೆಸ. 4:1 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು § ಫಿಲಿ. 3:17 ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ * ಫಿಲಿ. 4:7, ರೋಮಾ. 15:33 ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
ಫಿಲಿಪ್ಪಿಯವರಿಗೆ 4 : 10 (IRVKN)
ಅವರು ದಾನಕ್ಕಾಗಿ ಕೃತಜ್ಞತೆ † 2 ಕೊರಿ 11:9, ಫಿಲಿ. 2:30 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
ಫಿಲಿಪ್ಪಿಯವರಿಗೆ 4 : 11 (IRVKN)
ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ‡ 1 ತಿಮೊ. 6:6-8, 2 ಕೊರಿ 9:8, ಇಬ್ರಿ. 13:5 ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4 : 12 (IRVKN)
ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, § 1 ಕೊರಿ 4:11, 2 ಕೊರಿ 11:27 ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, * 2 ಕೊರಿ 11:9 ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
ಫಿಲಿಪ್ಪಿಯವರಿಗೆ 4 : 13 (IRVKN)
† 2 ಕೊರಿ 12:9, ಎಫೆ 3:16, 1 ತಿಮೊ. 1:12 ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಫಿಲಿಪ್ಪಿಯವರಿಗೆ 4 : 14 (IRVKN)
ಹೀಗಿದ್ದರೂ ‡ ಫಿಲಿ. 1:7 ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
ಫಿಲಿಪ್ಪಿಯವರಿಗೆ 4 : 15 (IRVKN)
ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ § 2 ಕೊರಿ 11:8-9 ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
ಫಿಲಿಪ್ಪಿಯವರಿಗೆ 4 : 16 (IRVKN)
ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
ಫಿಲಿಪ್ಪಿಯವರಿಗೆ 4 : 17 (IRVKN)
* 2 ಕೊರಿ 9:5 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, † ರೋಮಾ. 1:13 ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.
ಫಿಲಿಪ್ಪಿಯವರಿಗೆ 4 : 18 (IRVKN)
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ‡ ಫಿಲಿ. 2:25 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ § ಇಬ್ರಿ. 13:16 ಮೆಚ್ಚಿಕೆಯಾದದ್ದು, * ಆದಿ 8:21 ಸುಗಂಧವಾಸನೆಯೇ, ಇಷ್ಟ ಯಜ್ಞವೇ.
ಫಿಲಿಪ್ಪಿಯವರಿಗೆ 4 : 19 (IRVKN)
† ಕೀರ್ತ 23:1, 2 ಕೊರಿ 9:8 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ‡ ರೋಮಾ. 2:4, 9:23, 10:12, ಎಫೆ 1:7,18, ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
ಫಿಲಿಪ್ಪಿಯವರಿಗೆ 4 : 20 (IRVKN)
§ ಗಲಾ. 1:5, ರೋಮಾ. 11:36 ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್.
ಫಿಲಿಪ್ಪಿಯವರಿಗೆ 4 : 21 (IRVKN)
ವಂದನೆಗಳು ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. * ಗಲಾ. 1:2 ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
ಫಿಲಿಪ್ಪಿಯವರಿಗೆ 4 : 22 (IRVKN)
† 2 ಕೊರಿ 13:13 ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.
ಫಿಲಿಪ್ಪಿಯವರಿಗೆ 4 : 23 (IRVKN)
‡ ರೋಮಾ. 16:20 ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23