ಙ್ಞಾನೋಕ್ತಿಗಳು 1 : 1 (IRVKN)
ಪೀಠಿಕೆ: ಜ್ಞಾನೋಕ್ತಿಗಳ ಉದ್ದೇಶ
ಙ್ಞಾನೋಕ್ತಿಗಳು 1 : 2 (IRVKN)
ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
ಙ್ಞಾನೋಕ್ತಿಗಳು 1 : 3 (IRVKN)
ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.
ಙ್ಞಾನೋಕ್ತಿಗಳು 1 : 4 (IRVKN)
ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
ಙ್ಞಾನೋಕ್ತಿಗಳು 1 : 5 (IRVKN)
ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
ಙ್ಞಾನೋಕ್ತಿಗಳು 1 : 6 (IRVKN)
ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
ಙ್ಞಾನೋಕ್ತಿಗಳು 1 : 7 (IRVKN)
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ಙ್ಞಾನೋಕ್ತಿಗಳು 1 : 8 (IRVKN)
ಪಾಪಿಗಳ ಕುರಿತು ಎಚ್ಚರಿಕೆಗಳು ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಙ್ಞಾನೋಕ್ತಿಗಳು 1 : 9 (IRVKN)
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
ಙ್ಞಾನೋಕ್ತಿಗಳು 1 : 10 (IRVKN)
ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
ಙ್ಞಾನೋಕ್ತಿಗಳು 1 : 11 (IRVKN)
ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
ಙ್ಞಾನೋಕ್ತಿಗಳು 1 : 12 (IRVKN)
ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.
ಙ್ಞಾನೋಕ್ತಿಗಳು 1 : 13 (IRVKN)
ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ.
ಙ್ಞಾನೋಕ್ತಿಗಳು 1 : 14 (IRVKN)
ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ,
ಙ್ಞಾನೋಕ್ತಿಗಳು 1 : 15 (IRVKN)
ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.
ಙ್ಞಾನೋಕ್ತಿಗಳು 1 : 16 (IRVKN)
ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.
ಙ್ಞಾನೋಕ್ತಿಗಳು 1 : 17 (IRVKN)
ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
ಙ್ಞಾನೋಕ್ತಿಗಳು 1 : 18 (IRVKN)
ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
ಙ್ಞಾನೋಕ್ತಿಗಳು 1 : 19 (IRVKN)
ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
ಙ್ಞಾನೋಕ್ತಿಗಳು 1 : 20 (IRVKN)
ಜ್ಞಾನವನ್ನು ತಿರಸ್ಕರಿಸಿದರೆ ಎಚ್ಚರ ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
ಙ್ಞಾನೋಕ್ತಿಗಳು 1 : 21 (IRVKN)
ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
ಙ್ಞಾನೋಕ್ತಿಗಳು 1 : 22 (IRVKN)
“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
ಙ್ಞಾನೋಕ್ತಿಗಳು 1 : 23 (IRVKN)
ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
ಙ್ಞಾನೋಕ್ತಿಗಳು 1 : 24 (IRVKN)
ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
ಙ್ಞಾನೋಕ್ತಿಗಳು 1 : 25 (IRVKN)
ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.
ಙ್ಞಾನೋಕ್ತಿಗಳು 1 : 26 (IRVKN)
ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ
ಙ್ಞಾನೋಕ್ತಿಗಳು 1 : 27 (IRVKN)
ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.
ಙ್ಞಾನೋಕ್ತಿಗಳು 1 : 28 (IRVKN)
ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
ಙ್ಞಾನೋಕ್ತಿಗಳು 1 : 29 (IRVKN)
ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.
ಙ್ಞಾನೋಕ್ತಿಗಳು 1 : 30 (IRVKN)
ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.
ಙ್ಞಾನೋಕ್ತಿಗಳು 1 : 31 (IRVKN)
ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
ಙ್ಞಾನೋಕ್ತಿಗಳು 1 : 32 (IRVKN)
ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
ಙ್ಞಾನೋಕ್ತಿಗಳು 1 : 33 (IRVKN)
ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.
❮
❯