ಙ್ಞಾನೋಕ್ತಿಗಳು 11 : 1 (IRVKN)
ದೋಷಿ ಮತ್ತು ನಿರ್ದೋಷಿ ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
ಙ್ಞಾನೋಕ್ತಿಗಳು 11 : 2 (IRVKN)
ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.
ಙ್ಞಾನೋಕ್ತಿಗಳು 11 : 3 (IRVKN)
ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
ಙ್ಞಾನೋಕ್ತಿಗಳು 11 : 4 (IRVKN)
ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
ಙ್ಞಾನೋಕ್ತಿಗಳು 11 : 5 (IRVKN)
ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
ಙ್ಞಾನೋಕ್ತಿಗಳು 11 : 6 (IRVKN)
ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
ಙ್ಞಾನೋಕ್ತಿಗಳು 11 : 7 (IRVKN)
ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
ಙ್ಞಾನೋಕ್ತಿಗಳು 11 : 8 (IRVKN)
ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
ಙ್ಞಾನೋಕ್ತಿಗಳು 11 : 9 (IRVKN)
ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
ಙ್ಞಾನೋಕ್ತಿಗಳು 11 : 10 (IRVKN)
ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
ಙ್ಞಾನೋಕ್ತಿಗಳು 11 : 11 (IRVKN)
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.
ಙ್ಞಾನೋಕ್ತಿಗಳು 11 : 12 (IRVKN)
ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
ಙ್ಞಾನೋಕ್ತಿಗಳು 11 : 13 (IRVKN)
ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
ಙ್ಞಾನೋಕ್ತಿಗಳು 11 : 14 (IRVKN)
ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ * ಅಥವಾ ಜಯ. ಸಂರಕ್ಷಣೆ ಇರುವುದು.
ಙ್ಞಾನೋಕ್ತಿಗಳು 11 : 15 (IRVKN)
ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
ಙ್ಞಾನೋಕ್ತಿಗಳು 11 : 16 (IRVKN)
ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
ಙ್ಞಾನೋಕ್ತಿಗಳು 11 : 17 (IRVKN)
ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
ಙ್ಞಾನೋಕ್ತಿಗಳು 11 : 18 (IRVKN)
ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
ಙ್ಞಾನೋಕ್ತಿಗಳು 11 : 19 (IRVKN)
ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.
ಙ್ಞಾನೋಕ್ತಿಗಳು 11 : 20 (IRVKN)
ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
ಙ್ಞಾನೋಕ್ತಿಗಳು 11 : 21 (IRVKN)
ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
ಙ್ಞಾನೋಕ್ತಿಗಳು 11 : 22 (IRVKN)
ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.
ಙ್ಞಾನೋಕ್ತಿಗಳು 11 : 23 (IRVKN)
ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.
ಙ್ಞಾನೋಕ್ತಿಗಳು 11 : 24 (IRVKN)
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
ಙ್ಞಾನೋಕ್ತಿಗಳು 11 : 25 (IRVKN)
ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
ಙ್ಞಾನೋಕ್ತಿಗಳು 11 : 26 (IRVKN)
ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.
ಙ್ಞಾನೋಕ್ತಿಗಳು 11 : 27 (IRVKN)
ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.
ಙ್ಞಾನೋಕ್ತಿಗಳು 11 : 28 (IRVKN)
ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
ಙ್ಞಾನೋಕ್ತಿಗಳು 11 : 29 (IRVKN)
ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
ಙ್ಞಾನೋಕ್ತಿಗಳು 11 : 30 (IRVKN)
ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
ಙ್ಞಾನೋಕ್ತಿಗಳು 11 : 31 (IRVKN)
ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31