ಙ್ಞಾನೋಕ್ತಿಗಳು 14 : 1 (IRVKN)
ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
ಙ್ಞಾನೋಕ್ತಿಗಳು 14 : 2 (IRVKN)
ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
ಙ್ಞಾನೋಕ್ತಿಗಳು 14 : 3 (IRVKN)
* ಅಥವಾ ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು, ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
ಙ್ಞಾನೋಕ್ತಿಗಳು 14 : 4 (IRVKN)
ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.
ಙ್ಞಾನೋಕ್ತಿಗಳು 14 : 5 (IRVKN)
ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
ಙ್ಞಾನೋಕ್ತಿಗಳು 14 : 6 (IRVKN)
ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
ಙ್ಞಾನೋಕ್ತಿಗಳು 14 : 7 (IRVKN)
ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
ಙ್ಞಾನೋಕ್ತಿಗಳು 14 : 8 (IRVKN)
ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
ಙ್ಞಾನೋಕ್ತಿಗಳು 14 : 9 (IRVKN)
ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
ಙ್ಞಾನೋಕ್ತಿಗಳು 14 : 10 (IRVKN)
ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
ಙ್ಞಾನೋಕ್ತಿಗಳು 14 : 11 (IRVKN)
ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
ಙ್ಞಾನೋಕ್ತಿಗಳು 14 : 12 (IRVKN)
ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
ಙ್ಞಾನೋಕ್ತಿಗಳು 14 : 13 (IRVKN)
ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
ಙ್ಞಾನೋಕ್ತಿಗಳು 14 : 14 (IRVKN)
ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
ಙ್ಞಾನೋಕ್ತಿಗಳು 14 : 15 (IRVKN)
ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
ಙ್ಞಾನೋಕ್ತಿಗಳು 14 : 16 (IRVKN)
† ಅಥವಾ ಜ್ಞಾನಿಯು ಯೆಹೋವನಿಗೆ ಭಯಪಡುತ್ತಾನೆ ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
ಙ್ಞಾನೋಕ್ತಿಗಳು 14 : 17 (IRVKN)
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ‡ ಅಥವಾ ಜ್ಞಾನಿಗಳು ಮೌನವಾಗಿರುತ್ತಾರೆ. ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
ಙ್ಞಾನೋಕ್ತಿಗಳು 14 : 18 (IRVKN)
ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
ಙ್ಞಾನೋಕ್ತಿಗಳು 14 : 19 (IRVKN)
ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
ಙ್ಞಾನೋಕ್ತಿಗಳು 14 : 20 (IRVKN)
ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
ಙ್ಞಾನೋಕ್ತಿಗಳು 14 : 21 (IRVKN)
ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
ಙ್ಞಾನೋಕ್ತಿಗಳು 14 : 22 (IRVKN)
ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
ಙ್ಞಾನೋಕ್ತಿಗಳು 14 : 23 (IRVKN)
ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
ಙ್ಞಾನೋಕ್ತಿಗಳು 14 : 24 (IRVKN)
ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
ಙ್ಞಾನೋಕ್ತಿಗಳು 14 : 25 (IRVKN)
ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
ಙ್ಞಾನೋಕ್ತಿಗಳು 14 : 26 (IRVKN)
ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
ಙ್ಞಾನೋಕ್ತಿಗಳು 14 : 27 (IRVKN)
ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
ಙ್ಞಾನೋಕ್ತಿಗಳು 14 : 28 (IRVKN)
ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
ಙ್ಞಾನೋಕ್ತಿಗಳು 14 : 29 (IRVKN)
ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
ಙ್ಞಾನೋಕ್ತಿಗಳು 14 : 30 (IRVKN)
ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
ಙ್ಞಾನೋಕ್ತಿಗಳು 14 : 31 (IRVKN)
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
ಙ್ಞಾನೋಕ್ತಿಗಳು 14 : 32 (IRVKN)
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು § ಅಥವಾ ತನ್ನ ಸತ್ಯದಲ್ಲಿ. ಮರಣಕಾಲದಲ್ಲಿಯೂ ಆಶ್ರಯಹೊಂದುವನು.
ಙ್ಞಾನೋಕ್ತಿಗಳು 14 : 33 (IRVKN)
ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
ಙ್ಞಾನೋಕ್ತಿಗಳು 14 : 34 (IRVKN)
ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
ಙ್ಞಾನೋಕ್ತಿಗಳು 14 : 35 (IRVKN)
ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
❮
❯