ಙ್ಞಾನೋಕ್ತಿಗಳು 15 : 1 (IRVKN)
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
ಙ್ಞಾನೋಕ್ತಿಗಳು 15 : 2 (IRVKN)
ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
ಙ್ಞಾನೋಕ್ತಿಗಳು 15 : 3 (IRVKN)
ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
ಙ್ಞಾನೋಕ್ತಿಗಳು 15 : 4 (IRVKN)
ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
ಙ್ಞಾನೋಕ್ತಿಗಳು 15 : 5 (IRVKN)
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
ಙ್ಞಾನೋಕ್ತಿಗಳು 15 : 6 (IRVKN)
ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.
ಙ್ಞಾನೋಕ್ತಿಗಳು 15 : 7 (IRVKN)
ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
ಙ್ಞಾನೋಕ್ತಿಗಳು 15 : 8 (IRVKN)
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಙ್ಞಾನೋಕ್ತಿಗಳು 15 : 9 (IRVKN)
ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
ಙ್ಞಾನೋಕ್ತಿಗಳು 15 : 10 (IRVKN)
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
ಙ್ಞಾನೋಕ್ತಿಗಳು 15 : 11 (IRVKN)
ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.
ಙ್ಞಾನೋಕ್ತಿಗಳು 15 : 12 (IRVKN)
ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
ಙ್ಞಾನೋಕ್ತಿಗಳು 15 : 13 (IRVKN)
ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
ಙ್ಞಾನೋಕ್ತಿಗಳು 15 : 14 (IRVKN)
ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
ಙ್ಞಾನೋಕ್ತಿಗಳು 15 : 15 (IRVKN)
ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
ಙ್ಞಾನೋಕ್ತಿಗಳು 15 : 16 (IRVKN)
ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
ಙ್ಞಾನೋಕ್ತಿಗಳು 15 : 17 (IRVKN)
ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
ಙ್ಞಾನೋಕ್ತಿಗಳು 15 : 18 (IRVKN)
ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ಙ್ಞಾನೋಕ್ತಿಗಳು 15 : 19 (IRVKN)
ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
ಙ್ಞಾನೋಕ್ತಿಗಳು 15 : 20 (IRVKN)
ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
ಙ್ಞಾನೋಕ್ತಿಗಳು 15 : 21 (IRVKN)
ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
ಙ್ಞಾನೋಕ್ತಿಗಳು 15 : 22 (IRVKN)
ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
ಙ್ಞಾನೋಕ್ತಿಗಳು 15 : 23 (IRVKN)
ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
ಙ್ಞಾನೋಕ್ತಿಗಳು 15 : 24 (IRVKN)
ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.
ಙ್ಞಾನೋಕ್ತಿಗಳು 15 : 25 (IRVKN)
ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
ಙ್ಞಾನೋಕ್ತಿಗಳು 15 : 26 (IRVKN)
ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
ಙ್ಞಾನೋಕ್ತಿಗಳು 15 : 27 (IRVKN)
ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
ಙ್ಞಾನೋಕ್ತಿಗಳು 15 : 28 (IRVKN)
ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
ಙ್ಞಾನೋಕ್ತಿಗಳು 15 : 29 (IRVKN)
ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.
ಙ್ಞಾನೋಕ್ತಿಗಳು 15 : 30 (IRVKN)
* ಮೂಲತಃ ಕಣ್ಣಿನ ಬೆಳಕು. ಹಸನ್ಮುಖ ಹೃದಯಕ್ಕೆ ಆನಂದ, † ಮೂಲತಃ ಕಿವಿಗೆ ಬಿದ್ದ ಒಳ್ಳೆಯ ಸುದ್ದಿ ಎಲುಬಿಗೆ ಪುಷ್ಟಿ. ಶುಭಸಮಾಚಾರ ದೇಹಕ್ಕೆ ಆರೋಗ್ಯ.
ಙ್ಞಾನೋಕ್ತಿಗಳು 15 : 31 (IRVKN)
ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
ಙ್ಞಾನೋಕ್ತಿಗಳು 15 : 32 (IRVKN)
ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
ಙ್ಞಾನೋಕ್ತಿಗಳು 15 : 33 (IRVKN)
ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.
❮
❯