ಙ್ಞಾನೋಕ್ತಿಗಳು 16 : 1 (IRVKN)
ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
ಙ್ಞಾನೋಕ್ತಿಗಳು 16 : 2 (IRVKN)
ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.
ಙ್ಞಾನೋಕ್ತಿಗಳು 16 : 3 (IRVKN)
ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
ಙ್ಞಾನೋಕ್ತಿಗಳು 16 : 4 (IRVKN)
ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.
ಙ್ಞಾನೋಕ್ತಿಗಳು 16 : 5 (IRVKN)
ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
ಙ್ಞಾನೋಕ್ತಿಗಳು 16 : 6 (IRVKN)
ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಙ್ಞಾನೋಕ್ತಿಗಳು 16 : 7 (IRVKN)
ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
ಙ್ಞಾನೋಕ್ತಿಗಳು 16 : 8 (IRVKN)
ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.
ಙ್ಞಾನೋಕ್ತಿಗಳು 16 : 9 (IRVKN)
ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
ಙ್ಞಾನೋಕ್ತಿಗಳು 16 : 10 (IRVKN)
ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.
ಙ್ಞಾನೋಕ್ತಿಗಳು 16 : 11 (IRVKN)
ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.
ಙ್ಞಾನೋಕ್ತಿಗಳು 16 : 12 (IRVKN)
ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.
ಙ್ಞಾನೋಕ್ತಿಗಳು 16 : 13 (IRVKN)
ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು.
ಙ್ಞಾನೋಕ್ತಿಗಳು 16 : 14 (IRVKN)
ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.
ಙ್ಞಾನೋಕ್ತಿಗಳು 16 : 15 (IRVKN)
ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.
ಙ್ಞಾನೋಕ್ತಿಗಳು 16 : 16 (IRVKN)
ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
ಙ್ಞಾನೋಕ್ತಿಗಳು 16 : 17 (IRVKN)
ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.
ಙ್ಞಾನೋಕ್ತಿಗಳು 16 : 18 (IRVKN)
ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
ಙ್ಞಾನೋಕ್ತಿಗಳು 16 : 19 (IRVKN)
ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
ಙ್ಞಾನೋಕ್ತಿಗಳು 16 : 20 (IRVKN)
ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.
ಙ್ಞಾನೋಕ್ತಿಗಳು 16 : 21 (IRVKN)
ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.
ಙ್ಞಾನೋಕ್ತಿಗಳು 16 : 22 (IRVKN)
ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.
ಙ್ಞಾನೋಕ್ತಿಗಳು 16 : 23 (IRVKN)
ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
ಙ್ಞಾನೋಕ್ತಿಗಳು 16 : 24 (IRVKN)
ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
ಙ್ಞಾನೋಕ್ತಿಗಳು 16 : 25 (IRVKN)
ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.
ಙ್ಞಾನೋಕ್ತಿಗಳು 16 : 26 (IRVKN)
ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು.
ಙ್ಞಾನೋಕ್ತಿಗಳು 16 : 27 (IRVKN)
ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.
ಙ್ಞಾನೋಕ್ತಿಗಳು 16 : 28 (IRVKN)
ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.
ಙ್ಞಾನೋಕ್ತಿಗಳು 16 : 29 (IRVKN)
ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.
ಙ್ಞಾನೋಕ್ತಿಗಳು 16 : 30 (IRVKN)
ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.
ಙ್ಞಾನೋಕ್ತಿಗಳು 16 : 31 (IRVKN)
ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.
ಙ್ಞಾನೋಕ್ತಿಗಳು 16 : 32 (IRVKN)
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಙ್ಞಾನೋಕ್ತಿಗಳು 16 : 33 (IRVKN)
ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.
❮
❯