ಙ್ಞಾನೋಕ್ತಿಗಳು 18 : 1 (IRVKN)
ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
ಙ್ಞಾನೋಕ್ತಿಗಳು 18 : 2 (IRVKN)
ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
ಙ್ಞಾನೋಕ್ತಿಗಳು 18 : 3 (IRVKN)
ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
ಙ್ಞಾನೋಕ್ತಿಗಳು 18 : 4 (IRVKN)
ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.
ಙ್ಞಾನೋಕ್ತಿಗಳು 18 : 5 (IRVKN)
ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
ಙ್ಞಾನೋಕ್ತಿಗಳು 18 : 6 (IRVKN)
ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
ಙ್ಞಾನೋಕ್ತಿಗಳು 18 : 7 (IRVKN)
ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.
ಙ್ಞಾನೋಕ್ತಿಗಳು 18 : 8 (IRVKN)
ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
ಙ್ಞಾನೋಕ್ತಿಗಳು 18 : 9 (IRVKN)
ಕೆಲಸಗಳ್ಳನು ಕೆಡುಕನಿಗೆ ತಮ್ಮ.
ಙ್ಞಾನೋಕ್ತಿಗಳು 18 : 10 (IRVKN)
ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
ಙ್ಞಾನೋಕ್ತಿಗಳು 18 : 11 (IRVKN)
ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 18 : 12 (IRVKN)
ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
ಙ್ಞಾನೋಕ್ತಿಗಳು 18 : 13 (IRVKN)
ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
ಙ್ಞಾನೋಕ್ತಿಗಳು 18 : 14 (IRVKN)
ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
ಙ್ಞಾನೋಕ್ತಿಗಳು 18 : 15 (IRVKN)
ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
ಙ್ಞಾನೋಕ್ತಿಗಳು 18 : 16 (IRVKN)
ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
ಙ್ಞಾನೋಕ್ತಿಗಳು 18 : 17 (IRVKN)
ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
ಙ್ಞಾನೋಕ್ತಿಗಳು 18 : 18 (IRVKN)
ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
ಙ್ಞಾನೋಕ್ತಿಗಳು 18 : 19 (IRVKN)
ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
ಙ್ಞಾನೋಕ್ತಿಗಳು 18 : 20 (IRVKN)
ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
ಙ್ಞಾನೋಕ್ತಿಗಳು 18 : 21 (IRVKN)
ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
ಙ್ಞಾನೋಕ್ತಿಗಳು 18 : 22 (IRVKN)
ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
ಙ್ಞಾನೋಕ್ತಿಗಳು 18 : 23 (IRVKN)
ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
ಙ್ಞಾನೋಕ್ತಿಗಳು 18 : 24 (IRVKN)
ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.

1 2 3 4 5 6 7 8 9 10 11 12 13 14 15 16 17 18 19 20 21 22 23 24