ಙ್ಞಾನೋಕ್ತಿಗಳು 19 : 1 (IRVKN)
ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
ಙ್ಞಾನೋಕ್ತಿಗಳು 19 : 2 (IRVKN)
ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
ಙ್ಞಾನೋಕ್ತಿಗಳು 19 : 3 (IRVKN)
ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
ಙ್ಞಾನೋಕ್ತಿಗಳು 19 : 4 (IRVKN)
ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
ಙ್ಞಾನೋಕ್ತಿಗಳು 19 : 5 (IRVKN)
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
ಙ್ಞಾನೋಕ್ತಿಗಳು 19 : 6 (IRVKN)
ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
ಙ್ಞಾನೋಕ್ತಿಗಳು 19 : 7 (IRVKN)
ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
ಙ್ಞಾನೋಕ್ತಿಗಳು 19 : 8 (IRVKN)
ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
ಙ್ಞಾನೋಕ್ತಿಗಳು 19 : 9 (IRVKN)
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
ಙ್ಞಾನೋಕ್ತಿಗಳು 19 : 10 (IRVKN)
ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
ಙ್ಞಾನೋಕ್ತಿಗಳು 19 : 11 (IRVKN)
ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
ಙ್ಞಾನೋಕ್ತಿಗಳು 19 : 12 (IRVKN)
ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
ಙ್ಞಾನೋಕ್ತಿಗಳು 19 : 13 (IRVKN)
ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
ಙ್ಞಾನೋಕ್ತಿಗಳು 19 : 14 (IRVKN)
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
ಙ್ಞಾನೋಕ್ತಿಗಳು 19 : 15 (IRVKN)
ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
ಙ್ಞಾನೋಕ್ತಿಗಳು 19 : 16 (IRVKN)
ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
ಙ್ಞಾನೋಕ್ತಿಗಳು 19 : 17 (IRVKN)
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
ಙ್ಞಾನೋಕ್ತಿಗಳು 19 : 18 (IRVKN)
ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
ಙ್ಞಾನೋಕ್ತಿಗಳು 19 : 19 (IRVKN)
ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
ಙ್ಞಾನೋಕ್ತಿಗಳು 19 : 20 (IRVKN)
ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
ಙ್ಞಾನೋಕ್ತಿಗಳು 19 : 21 (IRVKN)
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
ಙ್ಞಾನೋಕ್ತಿಗಳು 19 : 22 (IRVKN)
* ಅಥವಾ ಇಷ್ಟವು ಔದಾರ್ಯದ ಪ್ರಮಾಣ, ಇದ್ದರೂ ಇಲ್ಲವೆಂದು ಸುಳ್ಳಾಡುವವನಿಗಿಂತಲೂ, ಏನೂ ಇಲ್ಲದವನೇ ಲೇಸು. ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
ಙ್ಞಾನೋಕ್ತಿಗಳು 19 : 23 (IRVKN)
ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
ಙ್ಞಾನೋಕ್ತಿಗಳು 19 : 24 (IRVKN)
ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
ಙ್ಞಾನೋಕ್ತಿಗಳು 19 : 25 (IRVKN)
ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
ಙ್ಞಾನೋಕ್ತಿಗಳು 19 : 26 (IRVKN)
ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
ಙ್ಞಾನೋಕ್ತಿಗಳು 19 : 27 (IRVKN)
ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
ಙ್ಞಾನೋಕ್ತಿಗಳು 19 : 28 (IRVKN)
ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
ಙ್ಞಾನೋಕ್ತಿಗಳು 19 : 29 (IRVKN)
ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29