ಙ್ಞಾನೋಕ್ತಿಗಳು 2 : 1 (IRVKN)
ಜ್ಞಾನದ ಫಲ ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
ಙ್ಞಾನೋಕ್ತಿಗಳು 2 : 2 (IRVKN)
ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
ಙ್ಞಾನೋಕ್ತಿಗಳು 2 : 3 (IRVKN)
ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.
ಙ್ಞಾನೋಕ್ತಿಗಳು 2 : 4 (IRVKN)
ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;
ಙ್ಞಾನೋಕ್ತಿಗಳು 2 : 5 (IRVKN)
ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
ಙ್ಞಾನೋಕ್ತಿಗಳು 2 : 6 (IRVKN)
ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
ಙ್ಞಾನೋಕ್ತಿಗಳು 2 : 7 (IRVKN)
ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
ಙ್ಞಾನೋಕ್ತಿಗಳು 2 : 8 (IRVKN)
ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.
ಙ್ಞಾನೋಕ್ತಿಗಳು 2 : 9 (IRVKN)
ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.
ಙ್ಞಾನೋಕ್ತಿಗಳು 2 : 10 (IRVKN)
ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.
ಙ್ಞಾನೋಕ್ತಿಗಳು 2 : 11 (IRVKN)
ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.
ಙ್ಞಾನೋಕ್ತಿಗಳು 2 : 12 (IRVKN)
ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.
ಙ್ಞಾನೋಕ್ತಿಗಳು 2 : 13 (IRVKN)
ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.
ಙ್ಞಾನೋಕ್ತಿಗಳು 2 : 14 (IRVKN)
ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.
ಙ್ಞಾನೋಕ್ತಿಗಳು 2 : 15 (IRVKN)
ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
ಙ್ಞಾನೋಕ್ತಿಗಳು 2 : 16 (IRVKN)
ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.
ಙ್ಞಾನೋಕ್ತಿಗಳು 2 : 17 (IRVKN)
ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.
ಙ್ಞಾನೋಕ್ತಿಗಳು 2 : 18 (IRVKN)
ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.
ಙ್ಞಾನೋಕ್ತಿಗಳು 2 : 19 (IRVKN)
ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.
ಙ್ಞಾನೋಕ್ತಿಗಳು 2 : 20 (IRVKN)
ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.
ಙ್ಞಾನೋಕ್ತಿಗಳು 2 : 21 (IRVKN)
ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.
ಙ್ಞಾನೋಕ್ತಿಗಳು 2 : 22 (IRVKN)
ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22