ಙ್ಞಾನೋಕ್ತಿಗಳು 21 : 1 (IRVKN)
ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
ಙ್ಞಾನೋಕ್ತಿಗಳು 21 : 2 (IRVKN)
ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
ಙ್ಞಾನೋಕ್ತಿಗಳು 21 : 3 (IRVKN)
ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
ಙ್ಞಾನೋಕ್ತಿಗಳು 21 : 4 (IRVKN)
ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
ಙ್ಞಾನೋಕ್ತಿಗಳು 21 : 5 (IRVKN)
ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
ಙ್ಞಾನೋಕ್ತಿಗಳು 21 : 6 (IRVKN)
ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
ಙ್ಞಾನೋಕ್ತಿಗಳು 21 : 7 (IRVKN)
ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
ಙ್ಞಾನೋಕ್ತಿಗಳು 21 : 8 (IRVKN)
ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
ಙ್ಞಾನೋಕ್ತಿಗಳು 21 : 9 (IRVKN)
ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
ಙ್ಞಾನೋಕ್ತಿಗಳು 21 : 10 (IRVKN)
ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
ಙ್ಞಾನೋಕ್ತಿಗಳು 21 : 11 (IRVKN)
ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
ಙ್ಞಾನೋಕ್ತಿಗಳು 21 : 12 (IRVKN)
ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
ಙ್ಞಾನೋಕ್ತಿಗಳು 21 : 13 (IRVKN)
ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
ಙ್ಞಾನೋಕ್ತಿಗಳು 21 : 14 (IRVKN)
ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
ಙ್ಞಾನೋಕ್ತಿಗಳು 21 : 15 (IRVKN)
ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
ಙ್ಞಾನೋಕ್ತಿಗಳು 21 : 16 (IRVKN)
ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
ಙ್ಞಾನೋಕ್ತಿಗಳು 21 : 17 (IRVKN)
ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
ಙ್ಞಾನೋಕ್ತಿಗಳು 21 : 18 (IRVKN)
ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
ಙ್ಞಾನೋಕ್ತಿಗಳು 21 : 19 (IRVKN)
ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
ಙ್ಞಾನೋಕ್ತಿಗಳು 21 : 20 (IRVKN)
ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
ಙ್ಞಾನೋಕ್ತಿಗಳು 21 : 21 (IRVKN)
ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
ಙ್ಞಾನೋಕ್ತಿಗಳು 21 : 22 (IRVKN)
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
ಙ್ಞಾನೋಕ್ತಿಗಳು 21 : 23 (IRVKN)
ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
ಙ್ಞಾನೋಕ್ತಿಗಳು 21 : 24 (IRVKN)
“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
ಙ್ಞಾನೋಕ್ತಿಗಳು 21 : 25 (IRVKN)
ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
ಙ್ಞಾನೋಕ್ತಿಗಳು 21 : 26 (IRVKN)
ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
ಙ್ಞಾನೋಕ್ತಿಗಳು 21 : 27 (IRVKN)
ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
ಙ್ಞಾನೋಕ್ತಿಗಳು 21 : 28 (IRVKN)
ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.
ಙ್ಞಾನೋಕ್ತಿಗಳು 21 : 29 (IRVKN)
ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.
ಙ್ಞಾನೋಕ್ತಿಗಳು 21 : 30 (IRVKN)
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ಙ್ಞಾನೋಕ್ತಿಗಳು 21 : 31 (IRVKN)
ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.
❮
❯