ಙ್ಞಾನೋಕ್ತಿಗಳು 22 : 1 (IRVKN)
ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
ಙ್ಞಾನೋಕ್ತಿಗಳು 22 : 2 (IRVKN)
ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
ಙ್ಞಾನೋಕ್ತಿಗಳು 22 : 3 (IRVKN)
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
ಙ್ಞಾನೋಕ್ತಿಗಳು 22 : 4 (IRVKN)
ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
ಙ್ಞಾನೋಕ್ತಿಗಳು 22 : 5 (IRVKN)
ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
ಙ್ಞಾನೋಕ್ತಿಗಳು 22 : 6 (IRVKN)
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
ಙ್ಞಾನೋಕ್ತಿಗಳು 22 : 7 (IRVKN)
ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
ಙ್ಞಾನೋಕ್ತಿಗಳು 22 : 8 (IRVKN)
ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
ಙ್ಞಾನೋಕ್ತಿಗಳು 22 : 9 (IRVKN)
ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
ಙ್ಞಾನೋಕ್ತಿಗಳು 22 : 10 (IRVKN)
ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
ಙ್ಞಾನೋಕ್ತಿಗಳು 22 : 11 (IRVKN)
ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.
ಙ್ಞಾನೋಕ್ತಿಗಳು 22 : 12 (IRVKN)
ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
ಙ್ಞಾನೋಕ್ತಿಗಳು 22 : 13 (IRVKN)
“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
ಙ್ಞಾನೋಕ್ತಿಗಳು 22 : 14 (IRVKN)
ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
ಙ್ಞಾನೋಕ್ತಿಗಳು 22 : 15 (IRVKN)
ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
ಙ್ಞಾನೋಕ್ತಿಗಳು 22 : 16 (IRVKN)
ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
ಙ್ಞಾನೋಕ್ತಿಗಳು 22 : 17 (IRVKN)
ಜ್ಞಾನಿಗಳ ಮಾತುಗಳು ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
ಙ್ಞಾನೋಕ್ತಿಗಳು 22 : 18 (IRVKN)
ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.
ಙ್ಞಾನೋಕ್ತಿಗಳು 22 : 19 (IRVKN)
ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
ಙ್ಞಾನೋಕ್ತಿಗಳು 22 : 20 (IRVKN)
ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
ಙ್ಞಾನೋಕ್ತಿಗಳು 22 : 21 (IRVKN)
ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
ಙ್ಞಾನೋಕ್ತಿಗಳು 22 : 22 (IRVKN)
ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
ಙ್ಞಾನೋಕ್ತಿಗಳು 22 : 23 (IRVKN)
ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
ಙ್ಞಾನೋಕ್ತಿಗಳು 22 : 24 (IRVKN)
ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
ಙ್ಞಾನೋಕ್ತಿಗಳು 22 : 25 (IRVKN)
ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
ಙ್ಞಾನೋಕ್ತಿಗಳು 22 : 26 (IRVKN)
ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
ಙ್ಞಾನೋಕ್ತಿಗಳು 22 : 27 (IRVKN)
ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
ಙ್ಞಾನೋಕ್ತಿಗಳು 22 : 28 (IRVKN)
ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
ಙ್ಞಾನೋಕ್ತಿಗಳು 22 : 29 (IRVKN)
ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29