ಙ್ಞಾನೋಕ್ತಿಗಳು 23 : 1 (IRVKN)
ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.* ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. ಅಥವಾ ಯಾರ ಸನ್ನಿಧಾನದಲ್ಲಿ ಇದ್ದೀ ಎಂಬುದನ್ನು ಮರೆಯದಿರು ಅಥವಾ ಯಾರ ಮುಂದಿರುವೆ ಎಂಬುದನ್ನು ಮರೆಯದಿರು.
ಙ್ಞಾನೋಕ್ತಿಗಳು 23 : 2 (IRVKN)
ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.
ಙ್ಞಾನೋಕ್ತಿಗಳು 23 : 3 (IRVKN)
ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
ಙ್ಞಾನೋಕ್ತಿಗಳು 23 : 4 (IRVKN)
ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
ಙ್ಞಾನೋಕ್ತಿಗಳು 23 : 5 (IRVKN)
ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
ಙ್ಞಾನೋಕ್ತಿಗಳು 23 : 6 (IRVKN)
ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
ಙ್ಞಾನೋಕ್ತಿಗಳು 23 : 7 (IRVKN)
ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
ಙ್ಞಾನೋಕ್ತಿಗಳು 23 : 8 (IRVKN)
ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
ಙ್ಞಾನೋಕ್ತಿಗಳು 23 : 9 (IRVKN)
ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
ಙ್ಞಾನೋಕ್ತಿಗಳು 23 : 10 (IRVKN)
ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
ಙ್ಞಾನೋಕ್ತಿಗಳು 23 : 11 (IRVKN)
ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
ಙ್ಞಾನೋಕ್ತಿಗಳು 23 : 12 (IRVKN)
ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
ಙ್ಞಾನೋಕ್ತಿಗಳು 23 : 13 (IRVKN)
ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
ಙ್ಞಾನೋಕ್ತಿಗಳು 23 : 14 (IRVKN)
ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
ಙ್ಞಾನೋಕ್ತಿಗಳು 23 : 15 (IRVKN)
ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
ಙ್ಞಾನೋಕ್ತಿಗಳು 23 : 16 (IRVKN)
ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.
ಙ್ಞಾನೋಕ್ತಿಗಳು 23 : 17 (IRVKN)
ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
ಙ್ಞಾನೋಕ್ತಿಗಳು 23 : 18 (IRVKN)
ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
ಙ್ಞಾನೋಕ್ತಿಗಳು 23 : 19 (IRVKN)
ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
ಙ್ಞಾನೋಕ್ತಿಗಳು 23 : 20 (IRVKN)
ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.
ಙ್ಞಾನೋಕ್ತಿಗಳು 23 : 21 (IRVKN)
ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
ಙ್ಞಾನೋಕ್ತಿಗಳು 23 : 22 (IRVKN)
ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
ಙ್ಞಾನೋಕ್ತಿಗಳು 23 : 23 (IRVKN)
ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.
ಙ್ಞಾನೋಕ್ತಿಗಳು 23 : 24 (IRVKN)
ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
ಙ್ಞಾನೋಕ್ತಿಗಳು 23 : 25 (IRVKN)
ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.
ಙ್ಞಾನೋಕ್ತಿಗಳು 23 : 26 (IRVKN)
ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.
ಙ್ಞಾನೋಕ್ತಿಗಳು 23 : 27 (IRVKN)
ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.
ಙ್ಞಾನೋಕ್ತಿಗಳು 23 : 28 (IRVKN)
ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.
ಙ್ಞಾನೋಕ್ತಿಗಳು 23 : 29 (IRVKN)
ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
ಙ್ಞಾನೋಕ್ತಿಗಳು 23 : 30 (IRVKN)
ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.
ಙ್ಞಾನೋಕ್ತಿಗಳು 23 : 31 (IRVKN)
ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ
ಙ್ಞಾನೋಕ್ತಿಗಳು 23 : 32 (IRVKN)
ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.
ಙ್ಞಾನೋಕ್ತಿಗಳು 23 : 33 (IRVKN)
ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.
ಙ್ಞಾನೋಕ್ತಿಗಳು 23 : 34 (IRVKN)
ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.
ಙ್ಞಾನೋಕ್ತಿಗಳು 23 : 35 (IRVKN)
ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.
❮
❯