ಙ್ಞಾನೋಕ್ತಿಗಳು 24 : 1 (IRVKN)
ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.
ಙ್ಞಾನೋಕ್ತಿಗಳು 24 : 2 (IRVKN)
ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.
ಙ್ಞಾನೋಕ್ತಿಗಳು 24 : 3 (IRVKN)
ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
ಙ್ಞಾನೋಕ್ತಿಗಳು 24 : 4 (IRVKN)
ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
ಙ್ಞಾನೋಕ್ತಿಗಳು 24 : 5 (IRVKN)
ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.
ಙ್ಞಾನೋಕ್ತಿಗಳು 24 : 6 (IRVKN)
ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
ಙ್ಞಾನೋಕ್ತಿಗಳು 24 : 7 (IRVKN)
ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
ಙ್ಞಾನೋಕ್ತಿಗಳು 24 : 8 (IRVKN)
ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
ಙ್ಞಾನೋಕ್ತಿಗಳು 24 : 9 (IRVKN)
ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
ಙ್ಞಾನೋಕ್ತಿಗಳು 24 : 10 (IRVKN)
ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.
ಙ್ಞಾನೋಕ್ತಿಗಳು 24 : 11 (IRVKN)
ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.
ಙ್ಞಾನೋಕ್ತಿಗಳು 24 : 12 (IRVKN)
“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
ಙ್ಞಾನೋಕ್ತಿಗಳು 24 : 13 (IRVKN)
ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
ಙ್ಞಾನೋಕ್ತಿಗಳು 24 : 14 (IRVKN)
ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
ಙ್ಞಾನೋಕ್ತಿಗಳು 24 : 15 (IRVKN)
ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.
ಙ್ಞಾನೋಕ್ತಿಗಳು 24 : 16 (IRVKN)
ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
ಙ್ಞಾನೋಕ್ತಿಗಳು 24 : 17 (IRVKN)
ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
ಙ್ಞಾನೋಕ್ತಿಗಳು 24 : 18 (IRVKN)
ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.
ಙ್ಞಾನೋಕ್ತಿಗಳು 24 : 19 (IRVKN)
ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.
ಙ್ಞಾನೋಕ್ತಿಗಳು 24 : 20 (IRVKN)
ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು.
ಙ್ಞಾನೋಕ್ತಿಗಳು 24 : 21 (IRVKN)
ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
ಙ್ಞಾನೋಕ್ತಿಗಳು 24 : 22 (IRVKN)
ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?
ಙ್ಞಾನೋಕ್ತಿಗಳು 24 : 23 (IRVKN)
ಬೇರೆ ಕೆಲವು ಹೇಳಿಕೆಗಳು ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
ಙ್ಞಾನೋಕ್ತಿಗಳು 24 : 24 (IRVKN)
ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
ಙ್ಞಾನೋಕ್ತಿಗಳು 24 : 25 (IRVKN)
ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.
ಙ್ಞಾನೋಕ್ತಿಗಳು 24 : 26 (IRVKN)
ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು.
ಙ್ಞಾನೋಕ್ತಿಗಳು 24 : 27 (IRVKN)
ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
ಙ್ಞಾನೋಕ್ತಿಗಳು 24 : 28 (IRVKN)
ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.
ಙ್ಞಾನೋಕ್ತಿಗಳು 24 : 29 (IRVKN)
“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
ಙ್ಞಾನೋಕ್ತಿಗಳು 24 : 30 (IRVKN)
ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
ಙ್ಞಾನೋಕ್ತಿಗಳು 24 : 31 (IRVKN)
ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
ಙ್ಞಾನೋಕ್ತಿಗಳು 24 : 32 (IRVKN)
ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.
ಙ್ಞಾನೋಕ್ತಿಗಳು 24 : 33 (IRVKN)
ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?
ಙ್ಞಾನೋಕ್ತಿಗಳು 24 : 34 (IRVKN)
ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
❮
❯