ಙ್ಞಾನೋಕ್ತಿಗಳು 25 : 1 (IRVKN)
ಸೊಲೊಮೋನನ ಇನ್ನೂ ಕೆಲವು ಜ್ಞಾನೋಕ್ತಿಗಳು ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.
ಙ್ಞಾನೋಕ್ತಿಗಳು 25 : 2 (IRVKN)
ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.
ಙ್ಞಾನೋಕ್ತಿಗಳು 25 : 3 (IRVKN)
ಆಕಾಶವು ಉನ್ನತ, ಭೂಮಿಯು ಅಗಾಧ, ರಾಜರ ಹೃದಯವು ಅಗೋಚರ.
ಙ್ಞಾನೋಕ್ತಿಗಳು 25 : 4 (IRVKN)
ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.
ಙ್ಞಾನೋಕ್ತಿಗಳು 25 : 5 (IRVKN)
ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.
ಙ್ಞಾನೋಕ್ತಿಗಳು 25 : 6 (IRVKN)
ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
ಙ್ಞಾನೋಕ್ತಿಗಳು 25 : 7 (IRVKN)
ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
ಙ್ಞಾನೋಕ್ತಿಗಳು 25 : 8 (IRVKN)
ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.
ಙ್ಞಾನೋಕ್ತಿಗಳು 25 : 9 (IRVKN)
ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.
ಙ್ಞಾನೋಕ್ತಿಗಳು 25 : 10 (IRVKN)
ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
ಙ್ಞಾನೋಕ್ತಿಗಳು 25 : 11 (IRVKN)
ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
ಙ್ಞಾನೋಕ್ತಿಗಳು 25 : 12 (IRVKN)
ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
ಙ್ಞಾನೋಕ್ತಿಗಳು 25 : 13 (IRVKN)
ಸುಗ್ಗೀಕಾಲದಲ್ಲಿ* ಸುಗ್ಗೀಕಾಲದಲ್ಲಿ ಅಥವಾ ಬೇಸಿಗೆಕಾಲದಲ್ಲಿ. ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
ಙ್ಞಾನೋಕ್ತಿಗಳು 25 : 14 (IRVKN)
ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.
ಙ್ಞಾನೋಕ್ತಿಗಳು 25 : 15 (IRVKN)
ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.
ಙ್ಞಾನೋಕ್ತಿಗಳು 25 : 16 (IRVKN)
ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.
ಙ್ಞಾನೋಕ್ತಿಗಳು 25 : 17 (IRVKN)
ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
ಙ್ಞಾನೋಕ್ತಿಗಳು 25 : 18 (IRVKN)
ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.
ಙ್ಞಾನೋಕ್ತಿಗಳು 25 : 19 (IRVKN)
ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.
ಙ್ಞಾನೋಕ್ತಿಗಳು 25 : 20 (IRVKN)
ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಗಾಯಕ್ಕೆ ಅಥವಾ ಸೋಡಉಪ್ಪಿಗೆ. ಹುಳಿಹೊಯ್ದಂತೆ.
ಙ್ಞಾನೋಕ್ತಿಗಳು 25 : 21 (IRVKN)
ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
ಙ್ಞಾನೋಕ್ತಿಗಳು 25 : 22 (IRVKN)
ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಅಥವಾ ಹೀಗೆ ಮಾಡುವುದ್ದರಿಂದ ನೀನು ಅವನನ್ನು ಅವಮಾನಗೊಳಿಸುವಿ. ಯೆಹೋವನೇ ನಿನಗೆ ಪ್ರತಿಫಲಕೊಡುವನು.
ಙ್ಞಾನೋಕ್ತಿಗಳು 25 : 23 (IRVKN)
ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
ಙ್ಞಾನೋಕ್ತಿಗಳು 25 : 24 (IRVKN)
ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
ಙ್ಞಾನೋಕ್ತಿಗಳು 25 : 25 (IRVKN)
ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
ಙ್ಞಾನೋಕ್ತಿಗಳು 25 : 26 (IRVKN)
ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.
ಙ್ಞಾನೋಕ್ತಿಗಳು 25 : 27 (IRVKN)
ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.
ಙ್ಞಾನೋಕ್ತಿಗಳು 25 : 28 (IRVKN)
ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28