ಙ್ಞಾನೋಕ್ತಿಗಳು 30 : 1 (IRVKN)
ಆಗೂರನ ಮಾತುಗಳು
ಙ್ಞಾನೋಕ್ತಿಗಳು 30 : 2 (IRVKN)
ದೈವೋಕ್ತಿ. ಯಾಕೆ* ಯಾಕೆ ಜಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ † ಇಥಿಯೇಲ ಅಂದರೆ ಓ ದೇವರೇ ನಾನು ದಣಿದಿದ್ದೇನೆ. , ಇಥಿಯೇಲನಿಗೂ ಉಕ್ಕಾಲನಿಗೂ ‡ ಉಕ್ಕಾಲ ಅಂದರೆ ನಾನು ಸಂಪೂರ್ಣವಾಗಿ ದಣಿದಿದ್ದೇನೆ. ಹೀಗೆ ಹೇಳಿದನು. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.
ಙ್ಞಾನೋಕ್ತಿಗಳು 30 : 3 (IRVKN)
ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.
ಙ್ಞಾನೋಕ್ತಿಗಳು 30 : 4 (IRVKN)
ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
ಙ್ಞಾನೋಕ್ತಿಗಳು 30 : 5 (IRVKN)
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
ಙ್ಞಾನೋಕ್ತಿಗಳು 30 : 6 (IRVKN)
ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
ಙ್ಞಾನೋಕ್ತಿಗಳು 30 : 7 (IRVKN)
ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
ಙ್ಞಾನೋಕ್ತಿಗಳು 30 : 8 (IRVKN)
ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
ಙ್ಞಾನೋಕ್ತಿಗಳು 30 : 9 (IRVKN)
ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
ಙ್ಞಾನೋಕ್ತಿಗಳು 30 : 10 (IRVKN)
ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
ಙ್ಞಾನೋಕ್ತಿಗಳು 30 : 11 (IRVKN)
ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.
ಙ್ಞಾನೋಕ್ತಿಗಳು 30 : 12 (IRVKN)
ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
ಙ್ಞಾನೋಕ್ತಿಗಳು 30 : 13 (IRVKN)
ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.
ಙ್ಞಾನೋಕ್ತಿಗಳು 30 : 14 (IRVKN)
ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
ಙ್ಞಾನೋಕ್ತಿಗಳು 30 : 15 (IRVKN)
ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
ಙ್ಞಾನೋಕ್ತಿಗಳು 30 : 16 (IRVKN)
ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.
ಙ್ಞಾನೋಕ್ತಿಗಳು 30 : 17 (IRVKN)
ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
ಙ್ಞಾನೋಕ್ತಿಗಳು 30 : 18 (IRVKN)
ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;
ಙ್ಞಾನೋಕ್ತಿಗಳು 30 : 19 (IRVKN)
ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
ಙ್ಞಾನೋಕ್ತಿಗಳು 30 : 20 (IRVKN)
ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
ಙ್ಞಾನೋಕ್ತಿಗಳು 30 : 21 (IRVKN)
ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
ಙ್ಞಾನೋಕ್ತಿಗಳು 30 : 22 (IRVKN)
ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
ಙ್ಞಾನೋಕ್ತಿಗಳು 30 : 23 (IRVKN)
ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
ಙ್ಞಾನೋಕ್ತಿಗಳು 30 : 24 (IRVKN)
ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
ಙ್ಞಾನೋಕ್ತಿಗಳು 30 : 25 (IRVKN)
ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
ಙ್ಞಾನೋಕ್ತಿಗಳು 30 : 26 (IRVKN)
ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
ಙ್ಞಾನೋಕ್ತಿಗಳು 30 : 27 (IRVKN)
ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
ಙ್ಞಾನೋಕ್ತಿಗಳು 30 : 28 (IRVKN)
ಹಲ್ಲಿಯನ್ನು§ ಹಲ್ಲಿಯನ್ನುಅಥವಾ ಜೇಡರಹುಳವು ಬಲೆಯನ್ನು ತನ್ನ ಕೈಯಿಂದ ಹೆಣೆಯುತ್ತದೆ. ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
ಙ್ಞಾನೋಕ್ತಿಗಳು 30 : 29 (IRVKN)
ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
ಙ್ಞಾನೋಕ್ತಿಗಳು 30 : 30 (IRVKN)
ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
ಙ್ಞಾನೋಕ್ತಿಗಳು 30 : 31 (IRVKN)
ಹೆಮ್ಮೆಯಿಂದ ನಡೆಯುವ ಹುಂಜ,* ಹೆಮ್ಮೆಯಿಂದ ನಡೆಯುವ ಹುಂಜ, ಅಥವಾ ಬೇಟೆನಾಯಿ ಅಥವಾ ಯುದ್ಧ-ಕುದುರೆ. ಹೋತವು ಸಹ, ಸೈನ್ಯಸಮೇತನಾದ ರಾಜ.
ಙ್ಞಾನೋಕ್ತಿಗಳು 30 : 32 (IRVKN)
ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.
ಙ್ಞಾನೋಕ್ತಿಗಳು 30 : 33 (IRVKN)
ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33