ಙ್ಞಾನೋಕ್ತಿಗಳು 31 : 1 (IRVKN)
ಅರಸನಾದ ಲೆಮೂವೇಲನ ಮಾತುಗಳು ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,
ಙ್ಞಾನೋಕ್ತಿಗಳು 31 : 2 (IRVKN)
ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?
ಙ್ಞಾನೋಕ್ತಿಗಳು 31 : 3 (IRVKN)
ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.
ಙ್ಞಾನೋಕ್ತಿಗಳು 31 : 4 (IRVKN)
ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
ಙ್ಞಾನೋಕ್ತಿಗಳು 31 : 5 (IRVKN)
ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
ಙ್ಞಾನೋಕ್ತಿಗಳು 31 : 6 (IRVKN)
ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.
ಙ್ಞಾನೋಕ್ತಿಗಳು 31 : 7 (IRVKN)
ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.
ಙ್ಞಾನೋಕ್ತಿಗಳು 31 : 8 (IRVKN)
ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
ಙ್ಞಾನೋಕ್ತಿಗಳು 31 : 9 (IRVKN)
ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.
ಙ್ಞಾನೋಕ್ತಿಗಳು 31 : 10 (IRVKN)
ಗುಣವತಿಯಾದ ಸತಿ ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
ಙ್ಞಾನೋಕ್ತಿಗಳು 31 : 11 (IRVKN)
ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
ಙ್ಞಾನೋಕ್ತಿಗಳು 31 : 12 (IRVKN)
ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು.
ಙ್ಞಾನೋಕ್ತಿಗಳು 31 : 13 (IRVKN)
ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
ಙ್ಞಾನೋಕ್ತಿಗಳು 31 : 14 (IRVKN)
ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
ಙ್ಞಾನೋಕ್ತಿಗಳು 31 : 15 (IRVKN)
ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
ಙ್ಞಾನೋಕ್ತಿಗಳು 31 : 16 (IRVKN)
ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
ಙ್ಞಾನೋಕ್ತಿಗಳು 31 : 17 (IRVKN)
ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
ಙ್ಞಾನೋಕ್ತಿಗಳು 31 : 18 (IRVKN)
ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ಙ್ಞಾನೋಕ್ತಿಗಳು 31 : 19 (IRVKN)
ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.
ಙ್ಞಾನೋಕ್ತಿಗಳು 31 : 20 (IRVKN)
ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
ಙ್ಞಾನೋಕ್ತಿಗಳು 31 : 21 (IRVKN)
ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
ಙ್ಞಾನೋಕ್ತಿಗಳು 31 : 22 (IRVKN)
ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.
ಙ್ಞಾನೋಕ್ತಿಗಳು 31 : 23 (IRVKN)
ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.
ಙ್ಞಾನೋಕ್ತಿಗಳು 31 : 24 (IRVKN)
ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.
ಙ್ಞಾನೋಕ್ತಿಗಳು 31 : 25 (IRVKN)
ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.
ಙ್ಞಾನೋಕ್ತಿಗಳು 31 : 26 (IRVKN)
ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.
ಙ್ಞಾನೋಕ್ತಿಗಳು 31 : 27 (IRVKN)
ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
ಙ್ಞಾನೋಕ್ತಿಗಳು 31 : 28 (IRVKN)
ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.
ಙ್ಞಾನೋಕ್ತಿಗಳು 31 : 29 (IRVKN)
ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.
ಙ್ಞಾನೋಕ್ತಿಗಳು 31 : 30 (IRVKN)
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
ಙ್ಞಾನೋಕ್ತಿಗಳು 31 : 31 (IRVKN)
ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.
❮
❯