ಙ್ಞಾನೋಕ್ತಿಗಳು 5 : 1 (IRVKN)
ವ್ಯಭಿಚಾರದಿಂದ ದೂರವಿರಲು ಎಚ್ಚರಿಕೆ ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.
ಙ್ಞಾನೋಕ್ತಿಗಳು 5 : 2 (IRVKN)
ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.
ಙ್ಞಾನೋಕ್ತಿಗಳು 5 : 3 (IRVKN)
ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ಙ್ಞಾನೋಕ್ತಿಗಳು 5 : 4 (IRVKN)
ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
ಙ್ಞಾನೋಕ್ತಿಗಳು 5 : 5 (IRVKN)
ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.
ಙ್ಞಾನೋಕ್ತಿಗಳು 5 : 6 (IRVKN)
ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.
ಙ್ಞಾನೋಕ್ತಿಗಳು 5 : 7 (IRVKN)
ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.
ಙ್ಞಾನೋಕ್ತಿಗಳು 5 : 8 (IRVKN)
ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
ಙ್ಞಾನೋಕ್ತಿಗಳು 5 : 9 (IRVKN)
ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
ಙ್ಞಾನೋಕ್ತಿಗಳು 5 : 10 (IRVKN)
ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.
ಙ್ಞಾನೋಕ್ತಿಗಳು 5 : 11 (IRVKN)
ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
ಙ್ಞಾನೋಕ್ತಿಗಳು 5 : 12 (IRVKN)
“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
ಙ್ಞಾನೋಕ್ತಿಗಳು 5 : 13 (IRVKN)
ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
ಙ್ಞಾನೋಕ್ತಿಗಳು 5 : 14 (IRVKN)
ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.
ಙ್ಞಾನೋಕ್ತಿಗಳು 5 : 15 (IRVKN)
ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
ಙ್ಞಾನೋಕ್ತಿಗಳು 5 : 16 (IRVKN)
ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
ಙ್ಞಾನೋಕ್ತಿಗಳು 5 : 17 (IRVKN)
ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.
ಙ್ಞಾನೋಕ್ತಿಗಳು 5 : 18 (IRVKN)
ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, * ಅಥವಾ ನೀನು ಯೌವನಪ್ರಾಯದಲ್ಲಿ ಮದುವೆಯಾದ ಪತ್ನಿ. ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
ಙ್ಞಾನೋಕ್ತಿಗಳು 5 : 19 (IRVKN)
ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
ಙ್ಞಾನೋಕ್ತಿಗಳು 5 : 20 (IRVKN)
ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
ಙ್ಞಾನೋಕ್ತಿಗಳು 5 : 21 (IRVKN)
ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
ಙ್ಞಾನೋಕ್ತಿಗಳು 5 : 22 (IRVKN)
ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.
ಙ್ಞಾನೋಕ್ತಿಗಳು 5 : 23 (IRVKN)
ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

1 2 3 4 5 6 7 8 9 10 11 12 13 14 15 16 17 18 19 20 21 22 23