ಙ್ಞಾನೋಕ್ತಿಗಳು 8 : 1 (IRVKN)
ಜ್ಞಾನವೆಂಬಾಕೆ ನೀಡುವ ಕರೆ ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?
ಙ್ಞಾನೋಕ್ತಿಗಳು 8 : 2 (IRVKN)
ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ.
ಙ್ಞಾನೋಕ್ತಿಗಳು 8 : 3 (IRVKN)
ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ,
ಙ್ಞಾನೋಕ್ತಿಗಳು 8 : 4 (IRVKN)
“ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ.
ಙ್ಞಾನೋಕ್ತಿಗಳು 8 : 5 (IRVKN)
ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
ಙ್ಞಾನೋಕ್ತಿಗಳು 8 : 6 (IRVKN)
ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,
ಙ್ಞಾನೋಕ್ತಿಗಳು 8 : 7 (IRVKN)
ನನ್ನ ಬಾಯಿ ಸತ್ಯವನ್ನೇ ಆಡುವುದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.
ಙ್ಞಾನೋಕ್ತಿಗಳು 8 : 8 (IRVKN)
ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ.
ಙ್ಞಾನೋಕ್ತಿಗಳು 8 : 9 (IRVKN)
ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.
ಙ್ಞಾನೋಕ್ತಿಗಳು 8 : 10 (IRVKN)
ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.
ಙ್ಞಾನೋಕ್ತಿಗಳು 8 : 11 (IRVKN)
ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
ಙ್ಞಾನೋಕ್ತಿಗಳು 8 : 12 (IRVKN)
ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.
ಙ್ಞಾನೋಕ್ತಿಗಳು 8 : 13 (IRVKN)
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ಙ್ಞಾನೋಕ್ತಿಗಳು 8 : 14 (IRVKN)
ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.
ಙ್ಞಾನೋಕ್ತಿಗಳು 8 : 15 (IRVKN)
ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.
ಙ್ಞಾನೋಕ್ತಿಗಳು 8 : 16 (IRVKN)
ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.
ಙ್ಞಾನೋಕ್ತಿಗಳು 8 : 17 (IRVKN)
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ಙ್ಞಾನೋಕ್ತಿಗಳು 8 : 18 (IRVKN)
ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.
ಙ್ಞಾನೋಕ್ತಿಗಳು 8 : 19 (IRVKN)
ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.
ಙ್ಞಾನೋಕ್ತಿಗಳು 8 : 20 (IRVKN)
* ಅಥವಾ ನಾನು ಸತ್ಯವನ್ನು ನೀತಿ ಮತ್ತು ನ್ಯಾಯ ಮಾರ್ಗಗಳಲ್ಲಿ ನಡೆಯುವಂತೆ ಮಾಡುತ್ತೇನೆ. ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.
ಙ್ಞಾನೋಕ್ತಿಗಳು 8 : 21 (IRVKN)
ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.
ಙ್ಞಾನೋಕ್ತಿಗಳು 8 : 22 (IRVKN)
ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.
ಙ್ಞಾನೋಕ್ತಿಗಳು 8 : 23 (IRVKN)
ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.
ಙ್ಞಾನೋಕ್ತಿಗಳು 8 : 24 (IRVKN)
ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.
ಙ್ಞಾನೋಕ್ತಿಗಳು 8 : 25 (IRVKN)
ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ,
ಙ್ಞಾನೋಕ್ತಿಗಳು 8 : 26 (IRVKN)
ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
ಙ್ಞಾನೋಕ್ತಿಗಳು 8 : 27 (IRVKN)
ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.
ಙ್ಞಾನೋಕ್ತಿಗಳು 8 : 28 (IRVKN)
ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು.
ಙ್ಞಾನೋಕ್ತಿಗಳು 8 : 29 (IRVKN)
ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,
ಙ್ಞಾನೋಕ್ತಿಗಳು 8 : 30 (IRVKN)
ನಾನು ಆತನ ಹತ್ತಿರ † ಅಥವಾ ಪ್ರಿಯ ಮಗನು. ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ,
ಙ್ಞಾನೋಕ್ತಿಗಳು 8 : 31 (IRVKN)
ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು.
ಙ್ಞಾನೋಕ್ತಿಗಳು 8 : 32 (IRVKN)
ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
ಙ್ಞಾನೋಕ್ತಿಗಳು 8 : 33 (IRVKN)
ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.
ಙ್ಞಾನೋಕ್ತಿಗಳು 8 : 34 (IRVKN)
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.
ಙ್ಞಾನೋಕ್ತಿಗಳು 8 : 35 (IRVKN)
ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.
ಙ್ಞಾನೋಕ್ತಿಗಳು 8 : 36 (IRVKN)
ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”
❮
❯