ಕೀರ್ತನೆಗಳು 10 : 1 (IRVKN)
ಯೆಹೋವನು ಕುಗ್ಗಿದವರನ್ನು ರಕ್ಷಿಸಬೇಕೆಂದು ಬೇಡಿಕೊಳ್ಳುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?
ಕೀರ್ತನೆಗಳು 10 : 2 (IRVKN)
ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.
ಕೀರ್ತನೆಗಳು 10 : 3 (IRVKN)
ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; * ಅಥವಾ ದುಷ್ಟನು ಲಾಭಬಡುಕನನ್ನು ಹರಸುತ್ತಾನೆ. ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
ಕೀರ್ತನೆಗಳು 10 : 4 (IRVKN)
ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
ಕೀರ್ತನೆಗಳು 10 : 5 (IRVKN)
ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
ಕೀರ್ತನೆಗಳು 10 : 6 (IRVKN)
ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.
ಕೀರ್ತನೆಗಳು 10 : 7 (IRVKN)
ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
ಕೀರ್ತನೆಗಳು 10 : 8 (IRVKN)
ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.
ಕೀರ್ತನೆಗಳು 10 : 9 (IRVKN)
ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.
ಕೀರ್ತನೆಗಳು 10 : 10 (IRVKN)
ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ.
ಕೀರ್ತನೆಗಳು 10 : 11 (IRVKN)
ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.
ಕೀರ್ತನೆಗಳು 10 : 12 (IRVKN)
ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.
ಕೀರ್ತನೆಗಳು 10 : 13 (IRVKN)
“ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?
ಕೀರ್ತನೆಗಳು 10 : 14 (IRVKN)
ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
ಕೀರ್ತನೆಗಳು 10 : 15 (IRVKN)
ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.
ಕೀರ್ತನೆಗಳು 10 : 16 (IRVKN)
ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
ಕೀರ್ತನೆಗಳು 10 : 17 (IRVKN)
ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.
ಕೀರ್ತನೆಗಳು 10 : 18 (IRVKN)
ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18