ಕೀರ್ತನೆಗಳು 101 : 1 (IRVKN)
ರಾಜಶ್ರೇಷ್ಠನ ಪ್ರತಿಜ್ಞೆ *ದಾವೀದನ ಕೀರ್ತನೆ.
ಕೀರ್ತ 15; 24 *ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.
ಕೀರ್ತನೆಗಳು 101 : 2 (IRVKN)
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
ಕೀರ್ತನೆಗಳು 101 : 3 (IRVKN)
ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.
ಕೀರ್ತನೆಗಳು 101 : 4 (IRVKN)
ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.
ಕೀರ್ತನೆಗಳು 101 : 5 (IRVKN)
ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
ಕೀರ್ತನೆಗಳು 101 : 6 (IRVKN)
ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
ಕೀರ್ತನೆಗಳು 101 : 7 (IRVKN)
ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
ಕೀರ್ತನೆಗಳು 101 : 8 (IRVKN)
ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.
❮
❯