ಕೀರ್ತನೆಗಳು 103 : 1 (IRVKN)
ದೇವರ ಕೃಪೆಯನ್ನು ಕೊಂಡಾಡುವುದು ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
ಕೀರ್ತನೆಗಳು 103 : 2 (IRVKN)
ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
ಕೀರ್ತನೆಗಳು 103 : 3 (IRVKN)
ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
ಕೀರ್ತನೆಗಳು 103 : 4 (IRVKN)
ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, * ಅಥವಾ ಆತನು ನಿನ್ನನ್ನು ಶಾಶ್ವತ ಪ್ರೀತಿಯಿಂದ ಮತ್ತು ಕೃಪೆಯಿಂದ ಆಶೀರ್ವದಿಸುತ್ತಾನೆ. ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
ಕೀರ್ತನೆಗಳು 103 : 5 (IRVKN)
ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
ಕೀರ್ತನೆಗಳು 103 : 6 (IRVKN)
ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
ಕೀರ್ತನೆಗಳು 103 : 7 (IRVKN)
ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.
ಕೀರ್ತನೆಗಳು 103 : 8 (IRVKN)
ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
ಕೀರ್ತನೆಗಳು 103 : 9 (IRVKN)
ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.
ಕೀರ್ತನೆಗಳು 103 : 10 (IRVKN)
ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
ಕೀರ್ತನೆಗಳು 103 : 11 (IRVKN)
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
ಕೀರ್ತನೆಗಳು 103 : 12 (IRVKN)
ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
ಕೀರ್ತನೆಗಳು 103 : 13 (IRVKN)
ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
ಕೀರ್ತನೆಗಳು 103 : 14 (IRVKN)
ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
ಕೀರ್ತನೆಗಳು 103 : 15 (IRVKN)
ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
ಕೀರ್ತನೆಗಳು 103 : 16 (IRVKN)
ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
ಕೀರ್ತನೆಗಳು 103 : 17 (IRVKN)
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
ಕೀರ್ತನೆಗಳು 103 : 18 (IRVKN)
ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
ಕೀರ್ತನೆಗಳು 103 : 19 (IRVKN)
ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.
ಕೀರ್ತನೆಗಳು 103 : 20 (IRVKN)
ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.
ಕೀರ್ತನೆಗಳು 103 : 21 (IRVKN)
ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.
ಕೀರ್ತನೆಗಳು 103 : 22 (IRVKN)
ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.

1 2 3 4 5 6 7 8 9 10 11 12 13 14 15 16 17 18 19 20 21 22