ಕೀರ್ತನೆಗಳು 105 : 1 (IRVKN)
ವಾಗ್ದಾನವನ್ನು ನೆರವೇರಿಸಿದ ಯೆಹೋವನಿಗೆ ಸ್ತೋತ್ರ
ಕೀರ್ತ 78; 106 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
ಕೀರ್ತನೆಗಳು 105 : 2 (IRVKN)
ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
ಕೀರ್ತನೆಗಳು 105 : 3 (IRVKN)
ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.
ಕೀರ್ತನೆಗಳು 105 : 4 (IRVKN)
ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ಕೀರ್ತನೆಗಳು 105 : 5 (IRVKN)
ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,
ಕೀರ್ತನೆಗಳು 105 : 6 (IRVKN)
ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.
ಕೀರ್ತನೆಗಳು 105 : 7 (IRVKN)
ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
ಕೀರ್ತನೆಗಳು 105 : 8 (IRVKN)
ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
ಕೀರ್ತನೆಗಳು 105 : 9 (IRVKN)
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
ಕೀರ್ತನೆಗಳು 105 : 10 (IRVKN)
ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.
ಕೀರ್ತನೆಗಳು 105 : 11 (IRVKN)
ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,
ಕೀರ್ತನೆಗಳು 105 : 12 (IRVKN)
ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು.
ಕೀರ್ತನೆಗಳು 105 : 13 (IRVKN)
ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,
ಕೀರ್ತನೆಗಳು 105 : 14 (IRVKN)
ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,
ಕೀರ್ತನೆಗಳು 105 : 15 (IRVKN)
“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.
ಕೀರ್ತನೆಗಳು 105 : 16 (IRVKN)
ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, * ಅಥವಾ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು. ಆಹಾರವನ್ನು ನಾಶಮಾಡಿಬಿಟ್ಟನು.
ಕೀರ್ತನೆಗಳು 105 : 17 (IRVKN)
ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.
ಕೀರ್ತನೆಗಳು 105 : 18 (IRVKN)
ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು.
ಕೀರ್ತನೆಗಳು 105 : 19 (IRVKN)
ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು.
ಕೀರ್ತನೆಗಳು 105 : 20 (IRVKN)
ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯು ಅವನನ್ನು ಬಿಡಿಸಿದನು.
ಕೀರ್ತನೆಗಳು 105 : 21 (IRVKN)
ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.
ಕೀರ್ತನೆಗಳು 105 : 22 (IRVKN)
ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು.
ಕೀರ್ತನೆಗಳು 105 : 23 (IRVKN)
ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.
ಕೀರ್ತನೆಗಳು 105 : 24 (IRVKN)
ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.
ಕೀರ್ತನೆಗಳು 105 : 25 (IRVKN)
ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
ಕೀರ್ತನೆಗಳು 105 : 26 (IRVKN)
ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.
ಕೀರ್ತನೆಗಳು 105 : 27 (IRVKN)
ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.
ಕೀರ್ತನೆಗಳು 105 : 28 (IRVKN)
ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.
ಕೀರ್ತನೆಗಳು 105 : 29 (IRVKN)
ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.
ಕೀರ್ತನೆಗಳು 105 : 30 (IRVKN)
ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.
ಕೀರ್ತನೆಗಳು 105 : 31 (IRVKN)
ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.
ಕೀರ್ತನೆಗಳು 105 : 32 (IRVKN)
ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,
ಕೀರ್ತನೆಗಳು 105 : 33 (IRVKN)
ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.
ಕೀರ್ತನೆಗಳು 105 : 34 (IRVKN)
ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,
ಕೀರ್ತನೆಗಳು 105 : 35 (IRVKN)
ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು.
ಕೀರ್ತನೆಗಳು 105 : 36 (IRVKN)
ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.
ಕೀರ್ತನೆಗಳು 105 : 37 (IRVKN)
ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.
ಕೀರ್ತನೆಗಳು 105 : 38 (IRVKN)
ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.
ಕೀರ್ತನೆಗಳು 105 : 39 (IRVKN)
ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.
ಕೀರ್ತನೆಗಳು 105 : 40 (IRVKN)
ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.
ಕೀರ್ತನೆಗಳು 105 : 41 (IRVKN)
ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, ಅರಣ್ಯದಲ್ಲಿ ನದಿಯಾಗಿ ಹರಿಯಿತು.
ಕೀರ್ತನೆಗಳು 105 : 42 (IRVKN)
ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು
ಕೀರ್ತನೆಗಳು 105 : 43 (IRVKN)
ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.
ಕೀರ್ತನೆಗಳು 105 : 44 (IRVKN)
ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.
ಕೀರ್ತನೆಗಳು 105 : 45 (IRVKN)
ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!
❮
❯