ಕೀರ್ತನೆಗಳು 106 : 1 (IRVKN)
ಯೆಹೋವನ ಕ್ಷಮಾಯಾಚನೆ
ಕೀರ್ತ 78; 105 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
ಕೀರ್ತನೆಗಳು 106 : 2 (IRVKN)
ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
ಕೀರ್ತನೆಗಳು 106 : 3 (IRVKN)
ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.
ಕೀರ್ತನೆಗಳು 106 : 4 (IRVKN)
ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
ಕೀರ್ತನೆಗಳು 106 : 5 (IRVKN)
ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
ಕೀರ್ತನೆಗಳು 106 : 6 (IRVKN)
ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
ಕೀರ್ತನೆಗಳು 106 : 7 (IRVKN)
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
ಕೀರ್ತನೆಗಳು 106 : 8 (IRVKN)
ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.
ಕೀರ್ತನೆಗಳು 106 : 9 (IRVKN)
ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
ಕೀರ್ತನೆಗಳು 106 : 10 (IRVKN)
ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.
ಕೀರ್ತನೆಗಳು 106 : 11 (IRVKN)
ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.
ಕೀರ್ತನೆಗಳು 106 : 12 (IRVKN)
ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
ಕೀರ್ತನೆಗಳು 106 : 13 (IRVKN)
ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,
ಕೀರ್ತನೆಗಳು 106 : 14 (IRVKN)
ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.
ಕೀರ್ತನೆಗಳು 106 : 15 (IRVKN)
ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
ಕೀರ್ತನೆಗಳು 106 : 16 (IRVKN)
ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
ಕೀರ್ತನೆಗಳು 106 : 17 (IRVKN)
ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
ಕೀರ್ತನೆಗಳು 106 : 18 (IRVKN)
ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
ಕೀರ್ತನೆಗಳು 106 : 19 (IRVKN)
ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.
ಕೀರ್ತನೆಗಳು 106 : 20 (IRVKN)
ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.
ಕೀರ್ತನೆಗಳು 106 : 21 (IRVKN)
ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
ಕೀರ್ತನೆಗಳು 106 : 22 (IRVKN)
ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
ಕೀರ್ತನೆಗಳು 106 : 23 (IRVKN)
ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
ಕೀರ್ತನೆಗಳು 106 : 24 (IRVKN)
ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.
ಕೀರ್ತನೆಗಳು 106 : 25 (IRVKN)
ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
ಕೀರ್ತನೆಗಳು 106 : 26 (IRVKN)
ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,
ಕೀರ್ತನೆಗಳು 106 : 27 (IRVKN)
ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
ಕೀರ್ತನೆಗಳು 106 : 28 (IRVKN)
ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
ಕೀರ್ತನೆಗಳು 106 : 29 (IRVKN)
ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.
ಕೀರ್ತನೆಗಳು 106 : 30 (IRVKN)
ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.
ಕೀರ್ತನೆಗಳು 106 : 31 (IRVKN)
ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.
ಕೀರ್ತನೆಗಳು 106 : 32 (IRVKN)
ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
ಕೀರ್ತನೆಗಳು 106 : 33 (IRVKN)
ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
ಕೀರ್ತನೆಗಳು 106 : 34 (IRVKN)
ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,
ಕೀರ್ತನೆಗಳು 106 : 35 (IRVKN)
ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.
ಕೀರ್ತನೆಗಳು 106 : 36 (IRVKN)
ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.
ಕೀರ್ತನೆಗಳು 106 : 37 (IRVKN)
ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
ಕೀರ್ತನೆಗಳು 106 : 38 (IRVKN)
ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
ಕೀರ್ತನೆಗಳು 106 : 39 (IRVKN)
ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.
ಕೀರ್ತನೆಗಳು 106 : 40 (IRVKN)
ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
ಕೀರ್ತನೆಗಳು 106 : 41 (IRVKN)
ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
ಕೀರ್ತನೆಗಳು 106 : 42 (IRVKN)
ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
ಕೀರ್ತನೆಗಳು 106 : 43 (IRVKN)
ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
ಕೀರ್ತನೆಗಳು 106 : 44 (IRVKN)
ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
ಕೀರ್ತನೆಗಳು 106 : 45 (IRVKN)
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
ಕೀರ್ತನೆಗಳು 106 : 46 (IRVKN)
ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
ಕೀರ್ತನೆಗಳು 106 : 47 (IRVKN)
ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
ಕೀರ್ತನೆಗಳು 106 : 48 (IRVKN)
ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!
❮
❯