ಕೀರ್ತನೆಗಳು 107 : 1 (IRVKN)
ಪಂಚಮ ಭಾಗ (107-150) ವಿಮುಕ್ತರ ಕೊಂಡಾಟ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
ಕೀರ್ತನೆಗಳು 107 : 2 (IRVKN)
ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
ಕೀರ್ತನೆಗಳು 107 : 3 (IRVKN)
ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
ಕೀರ್ತನೆಗಳು 107 : 4 (IRVKN)
ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
ಕೀರ್ತನೆಗಳು 107 : 5 (IRVKN)
ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
ಕೀರ್ತನೆಗಳು 107 : 6 (IRVKN)
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
ಕೀರ್ತನೆಗಳು 107 : 7 (IRVKN)
ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
ಕೀರ್ತನೆಗಳು 107 : 8 (IRVKN)
ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
ಕೀರ್ತನೆಗಳು 107 : 9 (IRVKN)
ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
ಕೀರ್ತನೆಗಳು 107 : 10 (IRVKN)
ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
ಕೀರ್ತನೆಗಳು 107 : 11 (IRVKN)
ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
ಕೀರ್ತನೆಗಳು 107 : 12 (IRVKN)
ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.
ಕೀರ್ತನೆಗಳು 107 : 13 (IRVKN)
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
ಕೀರ್ತನೆಗಳು 107 : 14 (IRVKN)
ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
ಕೀರ್ತನೆಗಳು 107 : 15 (IRVKN)
ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
ಕೀರ್ತನೆಗಳು 107 : 16 (IRVKN)
ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
ಕೀರ್ತನೆಗಳು 107 : 17 (IRVKN)
ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
ಕೀರ್ತನೆಗಳು 107 : 18 (IRVKN)
ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
ಕೀರ್ತನೆಗಳು 107 : 19 (IRVKN)
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
ಕೀರ್ತನೆಗಳು 107 : 20 (IRVKN)
ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
ಕೀರ್ತನೆಗಳು 107 : 21 (IRVKN)
ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
ಕೀರ್ತನೆಗಳು 107 : 22 (IRVKN)
ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
ಕೀರ್ತನೆಗಳು 107 : 23 (IRVKN)
ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
ಕೀರ್ತನೆಗಳು 107 : 24 (IRVKN)
ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
ಕೀರ್ತನೆಗಳು 107 : 25 (IRVKN)
ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
ಕೀರ್ತನೆಗಳು 107 : 26 (IRVKN)
ಜನರು* ಜನರು ಅಥವಾ ನಾವಿಕರು. ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
ಕೀರ್ತನೆಗಳು 107 : 27 (IRVKN)
ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
ಕೀರ್ತನೆಗಳು 107 : 28 (IRVKN)
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು.
ಕೀರ್ತನೆಗಳು 107 : 29 (IRVKN)
ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.
ಕೀರ್ತನೆಗಳು 107 : 30 (IRVKN)
ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
ಕೀರ್ತನೆಗಳು 107 : 31 (IRVKN)
ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.
ಕೀರ್ತನೆಗಳು 107 : 32 (IRVKN)
ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
ಕೀರ್ತನೆಗಳು 107 : 33 (IRVKN)
ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,
ಕೀರ್ತನೆಗಳು 107 : 34 (IRVKN)
ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
ಕೀರ್ತನೆಗಳು 107 : 35 (IRVKN)
ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
ಕೀರ್ತನೆಗಳು 107 : 36 (IRVKN)
ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
ಕೀರ್ತನೆಗಳು 107 : 37 (IRVKN)
ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.
ಕೀರ್ತನೆಗಳು 107 : 38 (IRVKN)
ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
ಕೀರ್ತನೆಗಳು 107 : 39 (IRVKN)
ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
ಕೀರ್ತನೆಗಳು 107 : 40 (IRVKN)
ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
ಕೀರ್ತನೆಗಳು 107 : 41 (IRVKN)
ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
ಕೀರ್ತನೆಗಳು 107 : 42 (IRVKN)
ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.
ಕೀರ್ತನೆಗಳು 107 : 43 (IRVKN)
ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.
❮
❯