ಕೀರ್ತನೆಗಳು 111 : 1 (IRVKN)
ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; [QBR] ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, [QBR] ಮನಃಪೂರ್ವಕವಾಗಿ ಕೀರ್ತಿಸುವೆನು. [QBR]
ಕೀರ್ತನೆಗಳು 111 : 2 (IRVKN)
ಯೆಹೋವನ ಕೃತ್ಯಗಳು ಮಹತ್ತಾದವುಗಳು; [QBR] ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. [QBR]
ಕೀರ್ತನೆಗಳು 111 : 3 (IRVKN)
ಆತನ ಕಾರ್ಯವು ಘನ, ಮಾನಗಳುಳ್ಳದ್ದು; [QBR] ಆತನ ನೀತಿಯು ಸದಾಕಾಲವೂ ಇರುವುದು. [QBR]
ಕೀರ್ತನೆಗಳು 111 : 4 (IRVKN)
ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. [QBR] ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. [QBR]
ಕೀರ್ತನೆಗಳು 111 : 5 (IRVKN)
ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; [QBR] ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ [QBR]
ಕೀರ್ತನೆಗಳು 111 : 6 (IRVKN)
ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ [QBR] ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. [QBR]
ಕೀರ್ತನೆಗಳು 111 : 7 (IRVKN)
ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; [QBR] ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. [QBR]
ಕೀರ್ತನೆಗಳು 111 : 8 (IRVKN)
ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. [QBR] ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. [QBR]
ಕೀರ್ತನೆಗಳು 111 : 9 (IRVKN)
ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; [QBR] ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; [QBR] ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. [QBR]
ಕೀರ್ತನೆಗಳು 111 : 10 (IRVKN)
ಯೆಹೋವನ ಭಯವೇ ಜ್ಞಾನಕ್ಕೆ ಮೂಲ; [QBR] ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. [QBR] ಆತನ ಸ್ತುತಿಯು ನಿರಂತರವಾದದ್ದು. [PE]
❮
❯