ಕೀರ್ತನೆಗಳು 113 : 1 (IRVKN)
ಯೆಹೋವನನ್ನು ಸ್ತುತಿಸುವುದು ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.
ಕೀರ್ತನೆಗಳು 113 : 2 (IRVKN)
ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ.
ಕೀರ್ತನೆಗಳು 113 : 3 (IRVKN)
ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.
ಕೀರ್ತನೆಗಳು 113 : 4 (IRVKN)
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
ಕೀರ್ತನೆಗಳು 113 : 5 (IRVKN)
ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
ಕೀರ್ತನೆಗಳು 113 : 6 (IRVKN)
ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
ಕೀರ್ತನೆಗಳು 113 : 7 (IRVKN)
ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
ಕೀರ್ತನೆಗಳು 113 : 8 (IRVKN)
ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
ಕೀರ್ತನೆಗಳು 113 : 9 (IRVKN)
ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

1 2 3 4 5 6 7 8 9