ಕೀರ್ತನೆಗಳು 115 : 1 (IRVKN)
ಯೆಹೋವನೊಬ್ಬನೇ ರಕ್ಷಕನು ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
ಕೀರ್ತನೆಗಳು 115 : 2 (IRVKN)
“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?
ಕೀರ್ತನೆಗಳು 115 : 3 (IRVKN)
ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
ಕೀರ್ತನೆಗಳು 115 : 4 (IRVKN)
ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ಕೀರ್ತನೆಗಳು 115 : 5 (IRVKN)
ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.
ಕೀರ್ತನೆಗಳು 115 : 6 (IRVKN)
ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.
ಕೀರ್ತನೆಗಳು 115 : 7 (IRVKN)
ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.
ಕೀರ್ತನೆಗಳು 115 : 8 (IRVKN)
ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.
ಕೀರ್ತನೆಗಳು 115 : 9 (IRVKN)
ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
ಕೀರ್ತನೆಗಳು 115 : 10 (IRVKN)
ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
ಕೀರ್ತನೆಗಳು 115 : 11 (IRVKN)
ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
ಕೀರ್ತನೆಗಳು 115 : 12 (IRVKN)
ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.
ಕೀರ್ತನೆಗಳು 115 : 13 (IRVKN)
ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.
ಕೀರ್ತನೆಗಳು 115 : 14 (IRVKN)
ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
ಕೀರ್ತನೆಗಳು 115 : 15 (IRVKN)
ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.
ಕೀರ್ತನೆಗಳು 115 : 16 (IRVKN)
ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
ಕೀರ್ತನೆಗಳು 115 : 17 (IRVKN)
ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.
ಕೀರ್ತನೆಗಳು 115 : 18 (IRVKN)
ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!
❮
❯
1
2
3
4
5
6
7
8
9
10
11
12
13
14
15
16
17
18