ಕೀರ್ತನೆಗಳು 116 : 1 (IRVKN)
ಕೃತಜ್ಞತಾಯಜ್ಞ ಕೀರ್ತನೆ
ಯೆಶಾ 38 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.
ಕೀರ್ತನೆಗಳು 116 : 2 (IRVKN)
ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
ಕೀರ್ತನೆಗಳು 116 : 3 (IRVKN)
ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.
ಕೀರ್ತನೆಗಳು 116 : 4 (IRVKN)
ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
ಕೀರ್ತನೆಗಳು 116 : 5 (IRVKN)
ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.
ಕೀರ್ತನೆಗಳು 116 : 6 (IRVKN)
ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.
ಕೀರ್ತನೆಗಳು 116 : 7 (IRVKN)
ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
ಕೀರ್ತನೆಗಳು 116 : 8 (IRVKN)
ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,
ಕೀರ್ತನೆಗಳು 116 : 9 (IRVKN)
ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
ಕೀರ್ತನೆಗಳು 116 : 10 (IRVKN)
“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,
ಕೀರ್ತನೆಗಳು 116 : 11 (IRVKN)
“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.
ಕೀರ್ತನೆಗಳು 116 : 12 (IRVKN)
ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
ಕೀರ್ತನೆಗಳು 116 : 13 (IRVKN)
ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಕೀರ್ತನೆಗಳು 116 : 14 (IRVKN)
ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
ಕೀರ್ತನೆಗಳು 116 : 15 (IRVKN)
ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
ಕೀರ್ತನೆಗಳು 116 : 16 (IRVKN)
ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
ಕೀರ್ತನೆಗಳು 116 : 17 (IRVKN)
ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಕೀರ್ತನೆಗಳು 116 : 18 (IRVKN)
ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
ಕೀರ್ತನೆಗಳು 116 : 19 (IRVKN)
ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!
❮
❯
1
2
3
4
5
6
7
8
9
10
11
12
13
14
15
16
17
18
19