ಕೀರ್ತನೆಗಳು 118 : 1 (IRVKN)
ಹಬ್ಬದ ಗೀತೆ
ನೆಹೆ 8:14-18; ಯೆಶಾ 12 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.
ಕೀರ್ತನೆಗಳು 118 : 2 (IRVKN)
ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
ಕೀರ್ತನೆಗಳು 118 : 3 (IRVKN)
ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
ಕೀರ್ತನೆಗಳು 118 : 4 (IRVKN)
ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
ಕೀರ್ತನೆಗಳು 118 : 5 (IRVKN)
ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
ಕೀರ್ತನೆಗಳು 118 : 6 (IRVKN)
ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
ಕೀರ್ತನೆಗಳು 118 : 7 (IRVKN)
ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
ಕೀರ್ತನೆಗಳು 118 : 8 (IRVKN)
ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ಕೀರ್ತನೆಗಳು 118 : 9 (IRVKN)
ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ಕೀರ್ತನೆಗಳು 118 : 10 (IRVKN)
ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ* ಬಲದಿಂದ ಅಥವಾ ಹೆಸರಿನಿಂದ. ಅವರನ್ನು ಸಂಹರಿಸುವೆನು.
ಕೀರ್ತನೆಗಳು 118 : 11 (IRVKN)
ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.
ಕೀರ್ತನೆಗಳು 118 : 12 (IRVKN)
ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
ಕೀರ್ತನೆಗಳು 118 : 13 (IRVKN)
ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
ಕೀರ್ತನೆಗಳು 118 : 14 (IRVKN)
ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.
ಕೀರ್ತನೆಗಳು 118 : 15 (IRVKN)
ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
ಕೀರ್ತನೆಗಳು 118 : 16 (IRVKN)
ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
ಕೀರ್ತನೆಗಳು 118 : 17 (IRVKN)
ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
ಕೀರ್ತನೆಗಳು 118 : 18 (IRVKN)
ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
ಕೀರ್ತನೆಗಳು 118 : 19 (IRVKN)
ನೀತಿದ್ವಾರಗಳನ್ನು† ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ. ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
ಕೀರ್ತನೆಗಳು 118 : 20 (IRVKN)
ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.
ಕೀರ್ತನೆಗಳು 118 : 21 (IRVKN)
ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.
ಕೀರ್ತನೆಗಳು 118 : 22 (IRVKN)
ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;
ಕೀರ್ತನೆಗಳು 118 : 23 (IRVKN)
ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.
ಕೀರ್ತನೆಗಳು 118 : 24 (IRVKN)
ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
ಕೀರ್ತನೆಗಳು 118 : 25 (IRVKN)
ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
ಕೀರ್ತನೆಗಳು 118 : 26 (IRVKN)
ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
ಕೀರ್ತನೆಗಳು 118 : 27 (IRVKN)
ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
ಕೀರ್ತನೆಗಳು 118 : 28 (IRVKN)
ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
ಕೀರ್ತನೆಗಳು 118 : 29 (IRVKN)
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.
❮
❯