ಕೀರ್ತನೆಗಳು 123 : 1 (IRVKN)
ಬಾಧಿಸಲ್ಪಟ್ಟವನ ನಿರೀಕ್ಷೆ *ಯಾತ್ರಾಗೀತೆ.
ನೆಹೆ 4:1-6 *
ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
ಕೀರ್ತನೆಗಳು 123 : 2 (IRVKN)
ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
ಕೀರ್ತನೆಗಳು 123 : 3 (IRVKN)
ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
ಕೀರ್ತನೆಗಳು 123 : 4 (IRVKN)
ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.

1 2 3 4