ಕೀರ್ತನೆಗಳು 125 : 1 (IRVKN)
ಯೆಹೋವನೇ ವಿಶ್ವಾಸಿಗಳ ಆಶ್ರಯ ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ಕೀರ್ತನೆಗಳು 125 : 2 (IRVKN)
ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
ಕೀರ್ತನೆಗಳು 125 : 3 (IRVKN)
ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
ಕೀರ್ತನೆಗಳು 125 : 4 (IRVKN)
ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.
ಕೀರ್ತನೆಗಳು 125 : 5 (IRVKN)
ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

1 2 3 4 5