ಕೀರ್ತನೆಗಳು 129 : 1 (IRVKN)
ಯೆಹೋವನು ತನ್ನ ಭಕ್ತರನ್ನು ಶತ್ರುಗಳಿಂದ ಬಿಡಿಸುವನೆಂಬ ನಿರೀಕ್ಷೆ *ಯಾತ್ರಾಗೀತೆ.
ಕೀರ್ತ 124 *“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.
ಕೀರ್ತನೆಗಳು 129 : 2 (IRVKN)
“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.
ಕೀರ್ತನೆಗಳು 129 : 3 (IRVKN)
ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.”
ಕೀರ್ತನೆಗಳು 129 : 4 (IRVKN)
ಆದರೆ ನೀತಿಸ್ವರೂಪನಾದ ಯೆಹೋವನು, * ಅಥವಾ ದುಷ್ಟರ ಬಂಧನಗಳಿಂದ ಬಿಡಿಸಿದನು. ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
ಕೀರ್ತನೆಗಳು 129 : 5 (IRVKN)
ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.
ಕೀರ್ತನೆಗಳು 129 : 6 (IRVKN)
ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
ಕೀರ್ತನೆಗಳು 129 : 7 (IRVKN)
ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
ಕೀರ್ತನೆಗಳು 129 : 8 (IRVKN)
ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.
❮
❯