ಕೀರ್ತನೆಗಳು 130 : 1 (IRVKN)
ಪಾಪಪರಿಹಾರಕ್ಕಾಗಿ ಪ್ರಾರ್ಥನೆ *ಯಾತ್ರಾಗೀತೆ.
ನೆಹೆ 1:4-11 *ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
ಕೀರ್ತನೆಗಳು 130 : 2 (IRVKN)
ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
ಕೀರ್ತನೆಗಳು 130 : 3 (IRVKN)
ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
ಕೀರ್ತನೆಗಳು 130 : 4 (IRVKN)
ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
ಕೀರ್ತನೆಗಳು 130 : 5 (IRVKN)
ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
ಕೀರ್ತನೆಗಳು 130 : 6 (IRVKN)
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
ಕೀರ್ತನೆಗಳು 130 : 7 (IRVKN)
ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
ಕೀರ್ತನೆಗಳು 130 : 8 (IRVKN)
ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.
❮
❯