ಕೀರ್ತನೆಗಳು 132 : 1 (IRVKN)
ದಾವೀದನ ಮನೆತನವನ್ನು ಪುನಃಸ್ಥಾಪಿಸಬೇಕೆಂಬ ಪ್ರಾರ್ಥನೆ *ಯಾತ್ರಾಗೀತೆ.
ಕೀರ್ತ 89; 2ಸಮು 7 *
ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
ಕೀರ್ತನೆಗಳು 132 : 2 (IRVKN)
ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
ಕೀರ್ತನೆಗಳು 132 : 3 (IRVKN)
“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,
ಕೀರ್ತನೆಗಳು 132 : 4 (IRVKN)
ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
ಕೀರ್ತನೆಗಳು 132 : 5 (IRVKN)
ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
ಕೀರ್ತನೆಗಳು 132 : 6 (IRVKN)
ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
ಕೀರ್ತನೆಗಳು 132 : 7 (IRVKN)
“ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”
ಕೀರ್ತನೆಗಳು 132 : 8 (IRVKN)
ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
ಕೀರ್ತನೆಗಳು 132 : 9 (IRVKN)
ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
ಕೀರ್ತನೆಗಳು 132 : 10 (IRVKN)
ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
ಕೀರ್ತನೆಗಳು 132 : 11 (IRVKN)
ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
ಕೀರ್ತನೆಗಳು 132 : 12 (IRVKN)
ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
ಕೀರ್ತನೆಗಳು 132 : 13 (IRVKN)
ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
ಕೀರ್ತನೆಗಳು 132 : 14 (IRVKN)
ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.
ಕೀರ್ತನೆಗಳು 132 : 15 (IRVKN)
ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
ಕೀರ್ತನೆಗಳು 132 : 16 (IRVKN)
ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.
ಕೀರ್ತನೆಗಳು 132 : 17 (IRVKN)
ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
ಕೀರ್ತನೆಗಳು 132 : 18 (IRVKN)
ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”

1 2 3 4 5 6 7 8 9 10 11 12 13 14 15 16 17 18