ಕೀರ್ತನೆಗಳು 135 : 1 (IRVKN)
ಸೃಷ್ಟಿಪಾಲಕನಾಗಿರುವ ಏಕದೇವರಿಗೆ ಸ್ತೋತ್ರ
ಕೀರ್ತ 136 ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,
ಕೀರ್ತನೆಗಳು 135 : 2 (IRVKN)
ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
ಕೀರ್ತನೆಗಳು 135 : 3 (IRVKN)
ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.
ಕೀರ್ತನೆಗಳು 135 : 4 (IRVKN)
ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
ಕೀರ್ತನೆಗಳು 135 : 5 (IRVKN)
ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
ಕೀರ್ತನೆಗಳು 135 : 6 (IRVKN)
ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.
ಕೀರ್ತನೆಗಳು 135 : 7 (IRVKN)
ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
ಕೀರ್ತನೆಗಳು 135 : 8 (IRVKN)
ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
ಕೀರ್ತನೆಗಳು 135 : 9 (IRVKN)
ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.
ಕೀರ್ತನೆಗಳು 135 : 10 (IRVKN)
ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.
ಕೀರ್ತನೆಗಳು 135 : 11 (IRVKN)
ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
ಕೀರ್ತನೆಗಳು 135 : 12 (IRVKN)
ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.
ಕೀರ್ತನೆಗಳು 135 : 13 (IRVKN)
ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.
ಕೀರ್ತನೆಗಳು 135 : 14 (IRVKN)
ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.
ಕೀರ್ತನೆಗಳು 135 : 15 (IRVKN)
ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ಕೀರ್ತನೆಗಳು 135 : 16 (IRVKN)
ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ,
ಕೀರ್ತನೆಗಳು 135 : 17 (IRVKN)
ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.
ಕೀರ್ತನೆಗಳು 135 : 18 (IRVKN)
ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.
ಕೀರ್ತನೆಗಳು 135 : 19 (IRVKN)
ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
ಕೀರ್ತನೆಗಳು 135 : 20 (IRVKN)
ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.
ಕೀರ್ತನೆಗಳು 135 : 21 (IRVKN)
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!
❮
❯
1
2
3
4
5
6
7
8
9
10
11
12
13
14
15
16
17
18
19
20
21