ಕೀರ್ತನೆಗಳು 137 : 1 (IRVKN)
ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, [QBR] ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು. [QBR]
ಕೀರ್ತನೆಗಳು 137 : 2 (IRVKN)
ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. [QBR]
ಕೀರ್ತನೆಗಳು 137 : 3 (IRVKN)
ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, [QBR] “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. [QBR]
ಕೀರ್ತನೆಗಳು 137 : 4 (IRVKN)
ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? [QBR]
ಕೀರ್ತನೆಗಳು 137 : 5 (IRVKN)
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ [QBR] [* ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ.] ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. [QBR]
ಕೀರ್ತನೆಗಳು 137 : 6 (IRVKN)
ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, [QBR] ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, [QBR] [† ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ.] ನನ್ನ ನಾಲಿಗೆಯು ಸೇದಿಹೋಗಲಿ. [QBR]
ಕೀರ್ತನೆಗಳು 137 : 7 (IRVKN)
ಯೆಹೋವನೇ, ಎದೋಮ್ಯರ ಹಾನಿಗಾಗಿ, [QBR] ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. [QBR] ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ. [QBR]
ಕೀರ್ತನೆಗಳು 137 : 8 (IRVKN)
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, [QBR] ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು. [QBR]
ಕೀರ್ತನೆಗಳು 137 : 9 (IRVKN)
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ. [PE]

1 2 3 4 5 6 7 8 9

BG:

Opacity:

Color:


Size:


Font: