ಕೀರ್ತನೆಗಳು 138 : 1 (IRVKN)
ರಕ್ಷಣಾ ಕರ್ತನ ಸ್ತುತಿ *ದಾವೀದನ ಕೀರ್ತನೆ.
ಕೀರ್ತ 102:13-23 *
ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.
ಕೀರ್ತನೆಗಳು 138 : 2 (IRVKN)
ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. * ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
ಕೀರ್ತನೆಗಳು 138 : 3 (IRVKN)
ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
ಕೀರ್ತನೆಗಳು 138 : 4 (IRVKN)
ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.
ಕೀರ್ತನೆಗಳು 138 : 5 (IRVKN)
ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
ಕೀರ್ತನೆಗಳು 138 : 6 (IRVKN)
ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
ಕೀರ್ತನೆಗಳು 138 : 7 (IRVKN)
ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ಅಥವಾ ನನ್ನನ್ನು ಕಾಪಾಡುವಿ. ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.
ಕೀರ್ತನೆಗಳು 138 : 8 (IRVKN)
ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.

1 2 3 4 5 6 7 8