ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; [QBR] ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. [QBR] ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. [QBR]
ಕೀರ್ತನೆಗಳು 14 : 2 (IRVKN)
ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, [QBR] ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, [QBR]
ಕೀರ್ತನೆಗಳು 14 : 3 (IRVKN)
ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. [QBR] ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. [QBR]
ಕೀರ್ತನೆಗಳು 14 : 4 (IRVKN)
ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? [QBR] ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; [QBR] ಯೆಹೋವನನ್ನು ಸ್ಮರಿಸುವುದಿಲ್ಲ. [QBR]
ಕೀರ್ತನೆಗಳು 14 : 5 (IRVKN)
ಅವರು ಫಕ್ಕನೆ ಭಯಭ್ರಾಂತರಾಗುವರು; [QBR] ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. [QBR]
ಕೀರ್ತನೆಗಳು 14 : 6 (IRVKN)
ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ [QBR] ಯೆಹೋವನು ಅವರ ಆಶ್ರಯವಲ್ಲವೇ. [QBR]
ಕೀರ್ತನೆಗಳು 14 : 7 (IRVKN)
ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. [QBR] ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, [QBR] ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, [QBR] ಇಸ್ರಾಯೇಲರು ಹರ್ಷಿಸುವರು. [PE]