ಕೀರ್ತನೆಗಳು 141 : 1 (IRVKN)
ಬಲಾತ್ಕಾರ ದುಷ್ಪ್ರೇರಣೆಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ *ದಾವೀದನ ಕೀರ್ತನೆ.
ಕೀರ್ತ 140 *
ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.
ಕೀರ್ತನೆಗಳು 141 : 2 (IRVKN)
ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
ಕೀರ್ತನೆಗಳು 141 : 3 (IRVKN)
ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
ಕೀರ್ತನೆಗಳು 141 : 4 (IRVKN)
ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
ಕೀರ್ತನೆಗಳು 141 : 5 (IRVKN)
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
ಕೀರ್ತನೆಗಳು 141 : 6 (IRVKN)
ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.
ಕೀರ್ತನೆಗಳು 141 : 7 (IRVKN)
ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.
ಕೀರ್ತನೆಗಳು 141 : 8 (IRVKN)
ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
ಕೀರ್ತನೆಗಳು 141 : 9 (IRVKN)
ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
ಕೀರ್ತನೆಗಳು 141 : 10 (IRVKN)
ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.

1 2 3 4 5 6 7 8 9 10