ಕೀರ್ತನೆಗಳು 142 : 1 (IRVKN)
ಇಕ್ಕಟ್ಟಿನಲ್ಲಿದ್ದವನ ಪ್ರಾರ್ಥನೆ *ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ.
ಕೀರ್ತ 140; 1ಸಮು 22; 24 *
ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.
ಕೀರ್ತನೆಗಳು 142 : 2 (IRVKN)
ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
ಕೀರ್ತನೆಗಳು 142 : 3 (IRVKN)
ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.
ಕೀರ್ತನೆಗಳು 142 : 4 (IRVKN)
ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
ಕೀರ್ತನೆಗಳು 142 : 5 (IRVKN)
ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
ಕೀರ್ತನೆಗಳು 142 : 6 (IRVKN)
ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
ಕೀರ್ತನೆಗಳು 142 : 7 (IRVKN)
ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.

1 2 3 4 5 6 7