ಕೀರ್ತನೆಗಳು 144 : 1 (IRVKN)
ಜಯದ ಗೀತೆ, ಸೌಭಾಗ್ಯದ ನಿರೀಕ್ಷೆ *ದಾವೀದನ ಕೀರ್ತನೆ.
ಕೀರ್ತ 18; ಧರ್ಮೋ 33:26-29 *ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
ಕೀರ್ತನೆಗಳು 144 : 2 (IRVKN)
ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, * ಅಥವಾ ನನ್ನ ಜನವನ್ನು ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
ಕೀರ್ತನೆಗಳು 144 : 3 (IRVKN)
ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
ಕೀರ್ತನೆಗಳು 144 : 4 (IRVKN)
ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
ಕೀರ್ತನೆಗಳು 144 : 5 (IRVKN)
ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
ಕೀರ್ತನೆಗಳು 144 : 6 (IRVKN)
ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
ಕೀರ್ತನೆಗಳು 144 : 7 (IRVKN)
ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
ಕೀರ್ತನೆಗಳು 144 : 8 (IRVKN)
ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
ಕೀರ್ತನೆಗಳು 144 : 9 (IRVKN)
ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
ಕೀರ್ತನೆಗಳು 144 : 10 (IRVKN)
ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
ಕೀರ್ತನೆಗಳು 144 : 11 (IRVKN)
ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
ಕೀರ್ತನೆಗಳು 144 : 12 (IRVKN)
ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
ಕೀರ್ತನೆಗಳು 144 : 13 (IRVKN)
ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
ಕೀರ್ತನೆಗಳು 144 : 14 (IRVKN)
ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
ಕೀರ್ತನೆಗಳು 144 : 15 (IRVKN)
ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
❮
❯
1
2
3
4
5
6
7
8
9
10
11
12
13
14
15