ಕೀರ್ತನೆಗಳು 145 : 1 (IRVKN)
ಯೆಹೋವನ ಕೃಪೆ ಪ್ರಭಾವಗಳಿಗಾಗಿ ಕೊಂಡಾಟ ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
ಕೀರ್ತನೆಗಳು 145 : 2 (IRVKN)
ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
ಕೀರ್ತನೆಗಳು 145 : 3 (IRVKN)
ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.
ಕೀರ್ತನೆಗಳು 145 : 4 (IRVKN)
ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
ಕೀರ್ತನೆಗಳು 145 : 5 (IRVKN)
* ಕೆಲವು ಹಸ್ತಪ್ರತಿಗಳಲ್ಲಿ ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವೆನು ಎಂದು ಇದೆ. ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
ಕೀರ್ತನೆಗಳು 145 : 6 (IRVKN)
ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
ಕೀರ್ತನೆಗಳು 145 : 7 (IRVKN)
ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
ಕೀರ್ತನೆಗಳು 145 : 8 (IRVKN)
ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
ಕೀರ್ತನೆಗಳು 145 : 9 (IRVKN)
ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
ಕೀರ್ತನೆಗಳು 145 : 10 (IRVKN)
ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
ಕೀರ್ತನೆಗಳು 145 : 11 (IRVKN)
ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
ಕೀರ್ತನೆಗಳು 145 : 12 (IRVKN)
ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
ಕೀರ್ತನೆಗಳು 145 : 13 (IRVKN)
† ಕೆಲವು ಹಸ್ತಪ್ರತಿಗಳಲ್ಲಿ ಯೆಹೋವನು ತನ್ನ ಎಲ್ಲ ವಾಗ್ದಾನಗಳಲ್ಲಿ ನಂಬಿಗಸ್ತನು, ತನ್ನ ಎಲ್ಲಾ ಕ್ರಿಯೆಗಳಲ್ಲಿ ಕರುಣೆಯುಳ್ಳವನು ಆಗಿದ್ದಾನೆ ಎಂದು ಇದೆ. ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
ಕೀರ್ತನೆಗಳು 145 : 14 (IRVKN)
ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
ಕೀರ್ತನೆಗಳು 145 : 15 (IRVKN)
ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
ಕೀರ್ತನೆಗಳು 145 : 16 (IRVKN)
ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
ಕೀರ್ತನೆಗಳು 145 : 17 (IRVKN)
ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
ಕೀರ್ತನೆಗಳು 145 : 18 (IRVKN)
ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
ಕೀರ್ತನೆಗಳು 145 : 19 (IRVKN)
ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
ಕೀರ್ತನೆಗಳು 145 : 20 (IRVKN)
ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
ಕೀರ್ತನೆಗಳು 145 : 21 (IRVKN)
ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21