ಕೀರ್ತನೆಗಳು 147 : 1 (IRVKN)
ಸ್ವಪ್ರಜಾರಕ್ಷಕನಾಗಿರುವ ಸೃಷ್ಟಿಪಾಲಕನಿಗೆ ಸ್ತೋತ್ರ
ಕೀರ್ತ 33 ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.
ಕೀರ್ತನೆಗಳು 147 : 2 (IRVKN)
ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,
ಕೀರ್ತನೆಗಳು 147 : 3 (IRVKN)
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.
ಕೀರ್ತನೆಗಳು 147 : 4 (IRVKN)
ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
ಕೀರ್ತನೆಗಳು 147 : 5 (IRVKN)
ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.
ಕೀರ್ತನೆಗಳು 147 : 6 (IRVKN)
ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
ಕೀರ್ತನೆಗಳು 147 : 7 (IRVKN)
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
ಕೀರ್ತನೆಗಳು 147 : 8 (IRVKN)
ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಕೀರ್ತನೆಗಳು 147 : 9 (IRVKN)
ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.
ಕೀರ್ತನೆಗಳು 147 : 10 (IRVKN)
ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.
ಕೀರ್ತನೆಗಳು 147 : 11 (IRVKN)
ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.
ಕೀರ್ತನೆಗಳು 147 : 12 (IRVKN)
ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
ಕೀರ್ತನೆಗಳು 147 : 13 (IRVKN)
ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
ಕೀರ್ತನೆಗಳು 147 : 14 (IRVKN)
ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.
ಕೀರ್ತನೆಗಳು 147 : 15 (IRVKN)
ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.
ಕೀರ್ತನೆಗಳು 147 : 16 (IRVKN)
ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.
ಕೀರ್ತನೆಗಳು 147 : 17 (IRVKN)
ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?
ಕೀರ್ತನೆಗಳು 147 : 18 (IRVKN)
ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.
ಕೀರ್ತನೆಗಳು 147 : 19 (IRVKN)
ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
ಕೀರ್ತನೆಗಳು 147 : 20 (IRVKN)
ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!
❮
❯
1
2
3
4
5
6
7
8
9
10
11
12
13
14
15
16
17
18
19
20