ಕೀರ್ತನೆಗಳು 17 : 1 (IRVKN)
ಯೆಹೋವನೇ, ನ್ಯಾಯವಾದುದನ್ನು ಆಲೈಸು; [QBR] ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; [QBR] ಅದು ಕಪಟವಾದ ಬಾಯಿಂದ ಬಂದದ್ದಲ್ಲ. [QBR]
ಕೀರ್ತನೆಗಳು 17 : 2 (IRVKN)
ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; [QBR] ನೀನು ನೀತಿಗನುಸಾರವಾಗಿ ನೋಡುವವನಲ್ಲವೇ. [QBR]
ಕೀರ್ತನೆಗಳು 17 : 3 (IRVKN)
ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, [QBR] ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, [QBR] ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; [QBR] [* ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ.] ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. [QBR]
ಕೀರ್ತನೆಗಳು 17 : 4 (IRVKN)
ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ [QBR] ನಿನ್ನ ಮಾತನ್ನೇ ಅನುಸರಿಸಿದ್ದೇನೆ. [QBR]
ಕೀರ್ತನೆಗಳು 17 : 5 (IRVKN)
ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; [QBR] ನನ್ನ ಕಾಲು ಜಾರಲಿಲ್ಲ. [QBR]
ಕೀರ್ತನೆಗಳು 17 : 6 (IRVKN)
ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, [QBR] ಕಿವಿಗೊಟ್ಟು ಕೇಳು. [QBR]
ಕೀರ್ತನೆಗಳು 17 : 7 (IRVKN)
ಭುಜಬಲವನ್ನು ಪ್ರಯೋಗಿಸಿ, [QBR] ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, [QBR] ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು. [QBR]
ಕೀರ್ತನೆಗಳು 17 : 8 (IRVKN)
ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, [QBR] ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ. [QBR]
ಕೀರ್ತನೆಗಳು 17 : 9 (IRVKN)
ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; [QBR] ಕಣ್ಣು ಗುಡ್ಡಿನಂತೆಯೇ ಕಾಪಾಡು. [QBR]
ಕೀರ್ತನೆಗಳು 17 : 10 (IRVKN)
ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; [QBR] ಅಹಂಕಾರದಿಂದ ಮಾತನಾಡುತ್ತಾರೆ. [QBR]
ಕೀರ್ತನೆಗಳು 17 : 11 (IRVKN)
ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; [QBR] ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ. [QBR]
ಕೀರ್ತನೆಗಳು 17 : 12 (IRVKN)
ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, [QBR] ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ. [QBR]
ಕೀರ್ತನೆಗಳು 17 : 13 (IRVKN)
ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; [QBR] ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು. [QBR]
ಕೀರ್ತನೆಗಳು 17 : 14 (IRVKN)
ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು [QBR] ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; [QBR] ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. [QBR] ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ. [QBR]
ಕೀರ್ತನೆಗಳು 17 : 15 (IRVKN)
ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. [QBR] ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. [PE]
❮
❯