ಕೀರ್ತನೆಗಳು 18 : 1 (IRVKN)
ಜಯಪ್ರದನಾದ ಯೆಹೋವನ ಸ್ತುತಿ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.
ಕೀರ್ತನೆಗಳು 18 : 2 (IRVKN)
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
ಕೀರ್ತನೆಗಳು 18 : 3 (IRVKN)
ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
ಕೀರ್ತನೆಗಳು 18 : 4 (IRVKN)
ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.
ಕೀರ್ತನೆಗಳು 18 : 5 (IRVKN)
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
ಕೀರ್ತನೆಗಳು 18 : 6 (IRVKN)
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
ಕೀರ್ತನೆಗಳು 18 : 7 (IRVKN)
ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
ಕೀರ್ತನೆಗಳು 18 : 8 (IRVKN)
ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
ಕೀರ್ತನೆಗಳು 18 : 9 (IRVKN)
ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
ಕೀರ್ತನೆಗಳು 18 : 10 (IRVKN)
ಕೆರೂಬಿವಾಹನನಾಗಿ* ಕೆರೂಬಿವಾಹನನಾಗಿ ಹಳೆಯ ಒಡಂಬಡಿಕೆಯಲ್ಲಿರುವ ಕೆರೂಬ್ (ಬಹುವಚನ “ಕೆರೂಬಿಮ್”) ರೆಕ್ಕೆಯುಳ್ಳ ಜೀವಿಯಾಗಿದ್ದು, ಯೆಹೋವನ ಸ್ವರ್ಗೀಯ ಸಿಂಹಾಸನವನ್ನು ಕಾಯುತ್ತಿದ್ದಾರೆ. ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
ಕೀರ್ತನೆಗಳು 18 : 11 (IRVKN)
ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
ಕೀರ್ತನೆಗಳು 18 : 12 (IRVKN)
ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
ಕೀರ್ತನೆಗಳು 18 : 13 (IRVKN)
ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
ಕೀರ್ತನೆಗಳು 18 : 14 (IRVKN)
ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.
ಕೀರ್ತನೆಗಳು 18 : 15 (IRVKN)
ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
ಕೀರ್ತನೆಗಳು 18 : 16 (IRVKN)
ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, ಮಹಾಜಲರಾಶಿಗಳೊಳಗಿಂದ ಎಳೆದನು.
ಕೀರ್ತನೆಗಳು 18 : 17 (IRVKN)
ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
ಕೀರ್ತನೆಗಳು 18 : 18 (IRVKN)
ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.
ಕೀರ್ತನೆಗಳು 18 : 19 (IRVKN)
ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.
ಕೀರ್ತನೆಗಳು 18 : 20 (IRVKN)
ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.
ಕೀರ್ತನೆಗಳು 18 : 21 (IRVKN)
ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
ಕೀರ್ತನೆಗಳು 18 : 22 (IRVKN)
ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.
ಕೀರ್ತನೆಗಳು 18 : 23 (IRVKN)
ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
ಕೀರ್ತನೆಗಳು 18 : 24 (IRVKN)
ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
ಕೀರ್ತನೆಗಳು 18 : 25 (IRVKN)
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,
ಕೀರ್ತನೆಗಳು 18 : 26 (IRVKN)
ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
ಕೀರ್ತನೆಗಳು 18 : 27 (IRVKN)
ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
ಕೀರ್ತನೆಗಳು 18 : 28 (IRVKN)
ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
ಕೀರ್ತನೆಗಳು 18 : 29 (IRVKN)
ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು ಗೋಡೆಯನ್ನು ಹಾರುವೆನು ಅಥವಾ ಗೋಡೆಯನ್ನು ತುಳಿದುಹಾಕುವೆನು. .
ಕೀರ್ತನೆಗಳು 18 : 30 (IRVKN)
ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
ಕೀರ್ತನೆಗಳು 18 : 31 (IRVKN)
ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
ಕೀರ್ತನೆಗಳು 18 : 32 (IRVKN)
ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
ಕೀರ್ತನೆಗಳು 18 : 33 (IRVKN)
ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
ಕೀರ್ತನೆಗಳು 18 : 34 (IRVKN)
ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
ಕೀರ್ತನೆಗಳು 18 : 35 (IRVKN)
ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
ಕೀರ್ತನೆಗಳು 18 : 36 (IRVKN)
ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.
ಕೀರ್ತನೆಗಳು 18 : 37 (IRVKN)
ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
ಕೀರ್ತನೆಗಳು 18 : 38 (IRVKN)
ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.
ಕೀರ್ತನೆಗಳು 18 : 39 (IRVKN)
ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
ಕೀರ್ತನೆಗಳು 18 : 40 (IRVKN)
ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.
ಕೀರ್ತನೆಗಳು 18 : 41 (IRVKN)
ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
ಕೀರ್ತನೆಗಳು 18 : 42 (IRVKN)
ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
ಕೀರ್ತನೆಗಳು 18 : 43 (IRVKN)
ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
ಕೀರ್ತನೆಗಳು 18 : 44 (IRVKN)
ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.
ಕೀರ್ತನೆಗಳು 18 : 45 (IRVKN)
ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
ಕೀರ್ತನೆಗಳು 18 : 46 (IRVKN)
ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.
ಕೀರ್ತನೆಗಳು 18 : 47 (IRVKN)
ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
ಕೀರ್ತನೆಗಳು 18 : 48 (IRVKN)
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
ಕೀರ್ತನೆಗಳು 18 : 49 (IRVKN)
ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
ಕೀರ್ತನೆಗಳು 18 : 50 (IRVKN)
ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50